CrimeNEWSನಮ್ಮಜಿಲ್ಲೆ

ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಬಳಿಯ ಸುಮ್ಮನಹಳ್ಳಿ ಬ್ರಿಡ್ಜ್​ ಬಳಿ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಪ್ರಮೋದ್ ಅವರ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಪ್ರಮೋದ್‌ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದೆ. ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾನೆ.

ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ. ಹೊಯ್ಸಳ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಬೈಕ್ ಸವಾರನ ಸಾವಿಗೆ ರೋಡ್​ ಸ್ಟ್ರಿಪ್ಸ್ ಕಾರಣ: ಮತ್ತೊಂದೆಡೆ ಬೈಕ್ ಸವಾರ ಪ್ರಮೋದ್ ಸಾವಿಗೆ ರೋಡ್​ ಸ್ಟ್ರಿಪ್ಸ್ ಕಾರಣ ಎನ್ನಲಾಗುತ್ತಿದೆ. ಪ್ರಮೋದ್ ರಸ್ತೆಯಲ್ಲಿ ತೆರಳುತ್ತಿದ್ದಾಗ ರೋಡ್ ಸ್ಟ್ರಿಪ್ಸ್ ಬಳಿ ಬೈಕ್ ಸ್ಲೋ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ