Vijayapatha - ವಿಜಯಪಥ > Blog > NEWS > Crime > BMTC ಬಸ್ ಬೈಕ್‌ಗೆ ಡಿಕ್ಕಿ- ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವು
BMTC ಬಸ್ ಬೈಕ್‌ಗೆ ಡಿಕ್ಕಿ- ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವು
Deva06/01/2024
ಬೆಂಗಳೂರು: ಬೈಕ್‌ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವೋಲ್ವೋ ಬಸ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ.
ಎಳಂಗೋವನ್ ಸೆಂಕತ್ತವಲ್ (43) ಎಂಬಾತನೆ ಮೃತ ಬೈಕ್ ಸವಾರ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಬೈಕ್ನಲ್ಲಿ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಹೋಗುತ್ತಿದ್ದಾಗ ಅದೇ ಮಾರ್ಗವಾಗಿ ಬರುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಸವಾರ ನೆಲಕ್ಕೆ ಬಿದ್ದಿದ್ದರಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದವು.
ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಎಚ್ಎಎಲ್ ಠಾಣೆಯಲ್ಲಿ ಮಾಲತಿ ಪಿ. ಎಂಬುವರು ದೂರು ನೀಡಿದ್ದು, ಚಾಲಕ ಅಮರೇಶ ಬಸವಂತಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
Related
Deva
Leave a reply