ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುವ ಅತ್ಯುನ್ನತ ಗೌರವವಾದ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಅನ್ನು ವಿಶ್ವ ಗ್ರಾಮೋದಯ ಟ್ರಸ್ಟ್ ಪಾವಗಡದ ಸಂಸ್ಥಾಪಕ ಹಾಗೂ ಕಾರ್ಯದರ್ಶಿ ವಿ. ದಾಸಣ್ಣ ಅವರಿಗೆ ಪ್ರದಾನ ಮಾಡಲಾಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ತುಂಬಿರುವ ಅಂಗವಾಗಿ ಇಂದು ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಬಿಎಂಟಿಸಿ ಯಲಹಂಕ ಘಟಕ -30ರಲ್ಲಿ ನಿರ್ವಾಹಕರೂ ಆಗಿರುವ ವಿ.ದಾಸಣ್ಣ ಅವರಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಶ್ವ ಗ್ರಾಮೋದಯ ಟ್ರಸ್ಟ್ 18 ವರ್ಷಗಳಿಂದ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಅರಣ್ಯ ಅಭಿವೃದ್ಧಿ, ಹಸಿರು ಚಳವಳಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಮರ್ಪಣಾ ಭಾವದಿಂದ ನಿರಂತರವಾಗಿ ದುಡಿಯುತ್ತಿರುವ ಸೇವೆಗೆ ದೊರೆತಿರುವ ಈ ಗೌರವ ಪಾವಗಡದ ಜನತೆಗೆ ಹೆಮ್ಮೆ ಮತ್ತು ಸಂತಸವನ್ನುಂಟುಮಾಡಿದೆ ಎಂದು ದಾಸಣ್ಣ ಸಂತಸ ಹಂಚಿಕೊಂಡರು.
ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಭಾಗವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್, ಕೇಪಿಸಿಬಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಸೇರಿದಂತೆ ಹಲವರು ಇದ್ದರು.
Related










