CrimeNEWSನಮ್ಮಜಿಲ್ಲೆ

BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ತಿಂಗಳ ಆರಂಭದಲ್ಲೇ ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಬಿಎಂಟಿಸಿ ಚಾಲನಾ ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೌದು! ಇದೇ ಅಕ್ಟೋಬರ್‌ 18ರಂದು ನಡದಿರುವ ಘಟನೆ ಭಾರೀ ಸಂಚಲನ ಸೃಷ್ಟಿಸಿದ್ದು, ಬೆಂಗಳೂರಿನಲ್ಲಿ ಸಾರಿಗೆ ನೌಕರರು ಭಯದಲ್ಲಿ ಡ್ಯೂಟಿ ಮಾಡುವಂತ ವಾತಾವರಣ ಸೃಷ್ಟಿಯಾಗಿದೆ. ಅಂದು ಪ್ರಯಾಣಿಕನೊಬ್ಬ ಕಲ್ಲಿನಿಂದ ಕಂಡಕ್ಟರ್ ತಲೆಗೆ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಸದ್ಯ ಆತನ ಹೆಡೆಮುರಿಕಟ್ಟಿದ ನಿರ್ವಾಹಕನ ಸಹೋದ್ಯೋಗಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ವಿವರ: ಸ್ವಲ್ಪ ಯಾಮಾರಿದ್ದರೂ ಈ ಕಂಡಕ್ಟರ್ ಪ್ರಾಣವೇ ಹೋಗುತ್ತಿತ್ತು. ಹೀಗಾಗಿ ಬಿಎಂಟಿಸಿ ಬಸ್ ಚಾಲನಾ ಸಿಬ್ಬಂದಿ​ಗಳ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಕಾಡುತ್ತಿದೆ. ಕಳೆದ ಶುಕ್ರವಾರ ಅ.18ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ ಕಿರಾತಕ.

KA-14 F1107 ಬಿಎಂಟಿಸಿ ಬಸ್​ನಲ್ಲಿ ಈ ಘಟನೆ ನಡೆದಿದ್ದು, ಆ ಕಿಡಿಗೇಡಿ ಹೇಮಂತ್ ಎಂಬಾತನೆ ನಿರ್ವಾಹಕ ಸಂಗಪ್ಪ ಅವರ ತಲೆಗೆ ಕಲ್ಲು ಬೀಸಿದವನು. ಈ ವೇಳೆ ಗಾಯಗೊಂಡರು ನಿರ್ವಾಹಕ ಆತನನ್ನು ತನ್ನ ಸಹೋದ್ಯೋಗಿಗಳೊಂದಿಗೆ ಓಡಿ ಹಿಡಿದಿದ್ದಾರೆ.

ಆರೋಪಿ ಹೇಮಂತ್ ಮೂರು ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಜತೆ ಕಿರಿಕ್ ಮಾಡಿಕೊಂಡಿದ್ದ, ಆ ವೇಳೆ ಈತ ಕಂಡಕ್ಟರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಎಸ್ಕೇಪ್ ಆಗಿದ್ದ. ಇದಕ್ಕಾಗಿ ಆರೋಪಿ ಹೇಮಂತ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು 3 ದಿನಗಳಿಂದ ಹೊಂಚು ಹಾಕಿದ್ದ. ಅದರಂತೆ ಟಿನ್‌ ಫ್ಯಾಕ್ಟರಿ ಬಳಿ ಬಸ್‌ನಲ್ಲಿ ಊಟ ಮಾಡುತ್ತಿದ್ದ ನಿರ್ವಾಹಕರ ತಲೆಗೆ ಕಲ್ಲು ಹೊಡೆದು ಓಡಿಹೋಗುತ್ತಿದ್ದ.

ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆ ನಡೆದಿರುವ 3 ಘಟನೆ ನಡೆದಿದೆ. ಸೆಪ್ಟೆಂಬರ್ 8ರಂದು ಅತ್ತಿಬೆಲೆಯಿಂದ ಮೆಜೆಸ್ಟಿಕ್ ಬರುತ್ತಿದ್ದ ವೋಲ್ವೋ ಬಸ್​ನಲ್ಲಿ ಹೊಸ ರೋಡ್ ಬಸ್ ಸ್ಟಾಪ್​ನಲ್ಲಿ ಕಂಡಕ್ಟರ್​ಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಲು ಮುಂದಾಗಿದ್ದ.

ಅಕ್ಟೋಬರ್ 1ರಂದು ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಹರ್ಷ ಸಿನ್ಹಾ ಅನ್ನೋ ಯುವಕ 2-3 ಬಾರಿ ಚಾಕುವಿನಿಂದ ಚುಚ್ಚಿ ಕೊಲ್ಲಲು ಯತ್ನಿಸಿದ್ದ. ಇದಕ್ಕೂ ಮೂರು ತಿಂಗಳ ಹಿಂದೆ ಕುಮಾರಸ್ವಾಮಿ ಬಡಾವಣೆಯ ಇ ಬಸ್‌ ನಿಲ್ದಾಣದಲ್ಲಿ ನೈಟ್‌ಹಾಲ್ಟ್‌ ಆಗಿದ್ದಾಗ ಕಿಡಿಗೇಡಿಯೊಬ್ಬ ಚಾಲಕನಿಗೆ ಮಚ್ಚನಿಂದ ಹಲ್ಲೆ ಮಾಡಿದ್ದ.

ಈಗ ಇದೇ ಅಕ್ಟೋಬರ್ 18ರ ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಸ್ ಸ್ಟ್ಯಾಂಡ್ ನಲ್ಲಿ ಊಟ ಮಾಡುತ್ತಿರುವ ವೇಳೆ ಆರೋಪಿ ಹೇಮಂತ್ ದೊಡ್ಡದಾದ ಕಲ್ಲಿನಿಂದ ಕಂಡಕ್ಟರ್ ಸಂಗಪ್ಪನ ತಲೆಗೆ ಹೊಡೆದು ಎಸ್ಕೇಪ್ ಆಗುತ್ತಿದ್ದ ನಂತರ ಆತನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಇದರಿಂದ ಕಂಡಕ್ಟರ್​ಗಳು ತಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ