CrimeNEWSನಮ್ಮರಾಜ್ಯ

ಬಿಸಿಲ ಝಳಕ್ಕೆ ಬಿಎಂಟಿಸಿ ನಿರ್ವಾಹಕ ಸೇರಿ ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಎಂಟ್ರಿ ನೀಡಿದ್ದು, ಜನರನ್ನು ಬಿಸಿಲ ಬೇಗೆಯಿಂದ ಕೊಂಚ ರಕ್ಷಿಸಿದ್ದಾನೆ. ಆದರೆ ಬಿಸಿಲ ನಾಡು ರಾಯಚೂರಲ್ಲಿ ಸದ್ಯ ಮಳೆಯ ಸೂಚನೆ ಇಲ್ಲ. ಬಿಸಿಲಿನ ತಾಪದ ತೀವ್ರತೆ ಹೆಚ್ಚಾಗಿದ್ದು ಬಿಎಂಟಿಸಿ ನೌಕರರ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಎರಡು ಪ್ರತ್ಯೇಕ ಘಟನೆಗಳಲ್ಲಿ ಮಲ್ಲಯ್ಯ (45) ಹಾಗೂ ಆಂಜನೇಯ ಎಂಬುವರು ಅಸುನೀಗಿದ್ದಾರೆ. ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬಿಎಂಟಿಸಿ ಕಂಡಕ್ಟರ್‌ ಮಲ್ಲಯ್ಯ ಎಂಬುವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಲ್ಲಯ್ಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ನಿವಾಸಿ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಮಧ್ಯಾಹ್ನದ ವೇಳೆ ಮಸ್ಕಿ ಪಟ್ಟಣಕ್ಕೆ ದಿನಸಿ ಪದರ್ಥಗಳನ್ನು ತರಲು ಬಂದಾಗ ದುರಂತ ನಡೆದಿದೆ. ರಸ್ತೆಯಲ್ಲಿ ಕುಸಿದು ಬಿದ್ದ ತಕ್ಷಣ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ.

ಇತ್ತ, ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲಿ ಅಂಜನೇಯ (45) ಎಂಬುವರು ಮೃತಪಟ್ಟಿದ್ದಾರೆ. ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಬಿಸಿಲಿನ ಝಳ ತಾಳಲಾರದೇ ಸುಸ್ತಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಅಂದ್ಹಾಗೆ ನಿತ್ಯ ರಾಯಚೂರಲ್ಲಿ 44 ರಿಂದ 46°ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ