BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ ಡ್ಯೂಟಿ ರೋಟಾ ಪದ್ಧತಿ ಹಾಗೂ ಇತ್ಯಾದಿ ವಿಷಯಗಳ ಸಂಬಂಧವಾಗಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಅಂದರೆ ಸಂಸ್ಥೆಯ ನಿರ್ವಾಹಕರಾಗಿರುವವರ ಮೂಲವೇತನ 24 ಸಾವಿರ ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರ ಮೂಲವೇತ 27 ಸಾವಿರ ರೂ. ಮೂಲವೇತನದವರೆಗೆ ನಿಗದಿಪಡಿಸುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.
ನಗರದ ಶಾಂತಿನಗರದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಇದೇ ಜೂನ್ 12ರಂದು ನಡೆದ ಸಭೆಯಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳು ಕೆಲ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.
ಈ ಸಭೆಯಲ್ಲಿ ಸಂಶ್ಥೆಯ ಉತ್ತರ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಹೊರತುಪಡಿಸಿ ಉಳಿದ ಎಲ್ಲ ವಲಯಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿ (ಆ), ಎಲ್ಲ ವಲಯಗಳ ವಿಭಾಗೀಯ ಸಂಚಾರ ಅಧಿಕಾರಿಗಳು (ವಾಯುವ್ಯ ವಲಯ ಹೊರತುಪಡಿಸಿ) ಹಾಜರಿದ್ದರು.
ಈ ಹಿಂದೆ ಅಂದರೆ ಇದೇ ಜೂನ್ 5ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲ ಘಟಕಗಳಲ್ಲಿ ಈಗಾಗಲೇ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳ ಹಾಗೂ ಎಲ್ಲ ಚಾಲನಾ ಸಿಬ್ಬಂದಿಗಳ ಅಂಕಿ-ಅಂಶವನ್ನು ಅಭ್ಯಸಿಸಿ, ಸಾಮಾನ್ಯ ಪಾಳಿ ಅನುಸೂಚಿಗಳ ಕರ್ತವ್ಯ ನಿಯೋಜನೆ ಸಂಬಂಧ ನಿರ್ವಾಹಕರಿಗೆ 24,000 ರೂ. ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರಿಗೆ 27,000 ರೂ. ಮೂಲವೇತನ ಪಡೆಯುವವರನ್ನು ನಿಯೋನೆ ಮಾಡುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.
ಅಲ್ಲದೆ ಅಧಿಕ ಹೆಚ್ಚುವರಿ ಗಂಟೆ (Over time) ಇರುವ ಸಾಮಾನ್ಯ ಪಾಳಿ ಅನುಸೂಚಿಗಳನ್ನು ಪಾಳಿ ಮತ್ತು ರಾತ್ರಿ ವಸತಿ ಪಾಳಿಯಾಗಿ ಪರಿವರ್ತಿಸಲು ಪ್ರಸ್ತಾವನೆ ನೀಡುವಂತೆ ತಿಳಿಸಲಾಯಿತು.

Light Duty Committeeಯು ಮಾರ್ಗದ ಮೇಲೆ Light Duty ಕರ್ತವ್ಯಕ್ಕೆ ಶಿಫಾರಸು ಮಾಡಿದ ಚಾಲನಾ ಸಿಬ್ಬಂದಿಗಳಿಗಾಗಿ ಘಟಕಗಳಲ್ಲಿನ ಒಟ್ಟು ಶೇ.2 ಅನುಸೂಚಿಗಳನ್ನು ಮೀಸಲಿಡುವುದು.
ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರನ್ನು, ಚಾಲಕರ ಜೇಷ್ಠತಾ ಪಟ್ಟಿಗೆ ಸೇರಿಸಿಕೊಳ್ಳುವುದು. ಸಭೆಯಲ್ಲಿ ಚರ್ಚಿಸಿದಂತೆ ಅಗತ್ಯ ಕ್ರಮ ವಹಿಸಲು ತಿಳಿಸಿದ ಮುಖ್ಯ ಸಂಚಾರ ವ್ಯವಸ್ಥಾಪಕರು ಸಭೆಯನ್ನು ಪೂರ್ಣಗೊಳಿಸಿದರು.
Related


You Might Also Like
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....