ಬೆಂಗಳೂರು: ಯಾವುದೇ ನಿಬಂಧನೆಗಳಿಲ್ಲದೆ ಮುಷ್ಕರದ ವೇಳೆ ವಜಾಗೊಂಡಿರುವ ನೌಕರರ ತೆಗೆದುಕೊಳ್ಳುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಇದರ ಜತೆಗೆ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್‌ನೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಾರಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ನೀಡಲು ಮುಂದಾಗುತ್ತಿರುವುದಾಗಿ ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ಗೌರವಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಜಾಗೃತಾ ಮತ್ತು ಭದ್ರತಾ ಅಧಿಕಾರಿ ರಾಧಿಕಾ ಅವರನ್ನು ಭೇಟಿ ಮಾಡಿದರು.
ಈ ವೇಳೆ ಮಾತನಾಡಿದ ರಾಧಿಕಾ ಅವರು, ನೌಕರರಿಗೆ ಅನುಕೂಲಕರವಾಗುವ ರೀತಿಯಲ್ಲಿ ಸಂಸ್ಥೆ ಯೋಜನೆ ರೂಪಿಸುತ್ತಿದೆ. ಅತೀ ಶೀಘ್ರದಲ್ಲೇ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.
ಮುಷ್ಕರದ ಸಮಯದಲ್ಲಿ ವಜಾಗೊಂಡ ನೌಕರರನ್ನು ಯಾವುದೆ ಷರತ್ತುಗಳನ್ನು ವಿಧಿಸದೆ ವಾಪಸ್ ಕರೆದುಕೊಳ್ಳಬೇಕು. ಈ ಮೂಲಕ 6-4-2021 ರ ಯಥಾಸ್ಥಿತಿಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.
ಸಂಸ್ಥೆಯಲ್ಲಿ ಘಟಕ ಮಟ್ಟದಿಂದ ಕೇಂದ್ರ ಕಚೇರಿಯವರೆಗೂ ಬ್ರಹ್ಮಾಂಡ ಭ್ರಷ್ಟಾಚಾರದ ಕೂಗು ನೌಕರರಿಂದ ಕೇಳಿ ಬಂದಿದ್ದು, ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು.
ಸರಕಾರಿ ನೌಕರರಿಗೆ ನೀಡುವ ಹಾಗೆ ಸಾರಿಗೆ ನೌಕರರಿಗೂ ಸಹ ನಗದು ರಹಿತ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು. ಸರಕಾರಿ ನೌಕರರಿಗೆ ನೀಡುವ ವೇತನದ ಮಾದರಿಯಂತೆ ಸಾರಿಗೆ ನೌಕರರಿಗೂ ಸಹ ಸರಿಸಮಾನ ವೇತನ ಜಾರಿಗೊಳಿಸಬೇಕು.
ಸಂಸ್ಥೆಯಲ್ಲಿ ಏಕರೂಪ ಕಾನೂನು ಜಾರಿಗೊಳಿಸಿ. (ಸಿ & ಆರ್ ತಿದ್ದುಪಡಿ ಮಾಡುವುದು) ನಿರ್ದಿಷ್ಟ ಸಮಯದಲ್ಲಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದು. ಸಂಸ್ಥೆಯಲ್ಲಿ ನಿವೃತ್ತಿ ಹೊಂದಿರುವ ಎಲ್ಲ ನೌಕರರಿಗೂ ನೀಡಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡುವುದು. ಅವರಿಗೂ ಸಹ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಜಾರಿಮಾಡಬೇಕು.
ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ವಜಾಗೊಂಡು ಮರು ನೇಮಕವಾಗದೆ ಉಳಿದಿರುವ ನೌಕರರನ್ನು ಮಾನವೀಯತೆಯ ದೃಷ್ಟಿಯಿಂದ ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು.
ಇತ್ತೀಚಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮೇಲೆ ಮಾನಸಿಕ ಒತ್ತಡ ಹಾಗೂ ಅಧಿಕಾರಿಗಳ ಕಿರುಕುಳ ಹೆಚ್ಚಾಗಿದ್ದು, ಅನೇಕ ನೌಕರರು ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ಈ ಆತ್ಮಹತ್ಯೆಯಂತಹ ಪ್ರಕರಣಗಳು ಮರುಕಳಿಸದಂತೆ ನೌಕರರಲ್ಲಿ ಆತ್ಮಸ್ಥೆರ್ಯ ತುಂಬಿ, ಕಿರುಕುಳ ನೀಡುವ ಅಧಿಕಾರಿಗಳ ಮೇಲೆ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು.
ನೌಕರರ ಹಿತದೃಷ್ಟಿಯಿಂದ, ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರು ಹಾಗೂ ಉನ್ನತ ಅಧಿಕಾರಿಗಳನ್ನು ಒಳಗೊಂಡಂತೆ ಒಂದು ನೂತನ ಸಮಿತಿ ರಚಿಸುವುದು ಆ ಸಮಿತಿಯ ಮೂಲಕ ಉತ್ತಮ ಆಡಳಿತ ವ್ಯವಸ್ಥೆ ರೂಪಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಸಲ್ಲಿಸಿದರು.
ನೌಕರರ ಸಂಘದ ಅಧ್ಯಕ್ಷ ಜಗದೀಶ್, ಪದಾಧಿಕಾರಿಗಳಾದ ಸುಧಾಕರ ರೆಡ್ಡಿ, ಡಿ.ರಾಮು, ಯೋಗೇಶ್, ನಾಗೇಂದ್ರ, ಸ್ಥಳೀಯ ನೌಕರರ ಮುಖಂಡರಾದ ದೇವರಾಜ್ ಚೌರ್ ಮತ್ತಿತರರು ಇದ್ದರು.
Related
You Might Also Like
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...