ಬೆಂಗಳೂರು: ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಚಾಲಕ ಆಕೆ ಮೇಲೆ ನುಗ್ಗಿಸಲು ಯತ್ನಿಸಿದ ಘಟನೆ ಹೊಸ ತಿರುವು ಪಡೆದಿದ್ದು, ಚಾಲಕನನ್ನು ಅಮಾನತು ಮಾಡಲಾಗಿದೆ. ಮೇ 23ರಂದು ನಡೆದ ಘಟನೆ ಸಂಬಂಧ ಇಂದು ಚಾಲಕನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಈ ಘಟನೆಯ ಸಂಪೂರ್ಣ ದೃಶ್ಯಗಳು ಕಾರಿನ ಡ್ಯಾಶ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಯುವತಿ ಬಸ್‌ಗೆ ಅಡ್ಡವಾಗಿ ನಿಲ್ಲುವುದಕ್ಕೆ ಮುಂಚೆ ನಡೆದಿದ್ದೇನು ಅನ್ನೋ ತನಿಖೆ ಸಹ ಮುಂದುವರಿದಿದೆ. ಮೇ 23ರಜೆ 5.40ಕ್ಕೆ ಕಬ್ಬನ್ ಪೇಟೆ ಸಿಗ್ನಲ್‌ನಲ್ಲಿ ಈ ಘಟನೆ ನಡೆದಿತ್ತು.
ಈ ವೇಳೆ ಯುವತಿ ಜಸ್ಟ್ ಮಿಸ್ ಆದ ದೃಶ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು ಯುವತಿ ಮೇಲೆ ಬಸ್ ನುಗ್ಗಿಸಲು ಚಾಲಕ ಮುಂದಾಗಿದ್ದು, ಸ್ವಲ್ಪ ಯಾಮಾರಿದ್ರು ಯುವತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನಿಸಿದ ವೇಳೆ ಬಸ್ ನಿಲ್ಲಿಸಲು ಕಾರು ಚಾಲಕ ಹೇಳಿದರೂ ನಿಲ್ಲಿಸದೇ ಚಾಲನೆ ಮಾಡಿದ್ದಾನೆ. ಅಲ್ಲದೆ ಅತಿವೇಗ ಹಾಗೂ ಅಜಾಗರೂಕತೆಯ ಅಪರಾಧ ಮಾಡಿದ್ದಕ್ಕೆ ಬಿಎಂಟಿಸಿ ಚಾಲಕ ಪ್ರಶಾಂತ್ ಎಂಬುವರನ್ನು ಅಮಾನತು ಮಾಡಲಾಗಿದೆ.
ನಿಜವಾಗಿ ಅಂದು ನಡೆದಿದ್ದೇನು?: ಮೇ 23ರಂದು ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಕಿರಿಕ್ ಆಗಿತ್ತು. ರೊಚ್ಚಿಗೆದ್ದ ಯುವತಿ ಬಸ್ ಚಾಲಕನ ಪ್ರಶ್ನೆ ಮಾಡಲು ಬಸ್ ಅಡ್ಡಗಟ್ಟಿದ್ದರು. ಆದರೆ ಡ್ರೈವರ್ ಯುವತಿಯನ್ನು ಲೆಕ್ಕಿಸದೇ ಬಸ್ ನುಗ್ಗಿಸಿದ್ದ. ಚಾಲಕನ ಈ ಕೃತ್ಯ ನೋಡಿದ ಜನ ಬೆಚ್ಚಿಬಿದ್ದಿದ್ದರು.
ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನ ಪ್ರಶ್ನೆ ಮಾಡಿದ್ದರು. ಈ ಘಟನೆಗೂ ಮುಂಚೆ ಯುವತಿ ಮತ್ತು ಬಸ್ ಡ್ರೈವರ್ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
ಬಸ್ ಚಾಲಕ ಹೇಳೋದೇನು?: ಬಿಎಂಟಿಸಿ ಚಾಲಕ ಪ್ರಶಾಂತ್ ಮಾಧ್ಯಮಗಳೊಂದಿಗೆ ಮಾತನಾಡಿ, ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಕಬ್ಬನ್ ಪೇಟೆ ಸಿಗ್ನಲ್‌ನಲ್ಲಿ ನಡೆದಿದ್ದು. ಅದಕ್ಕೂ ಮುಂಚೆ ಹಡ್ಸನ್ ಸಿಗ್ನಲ್‌ನಲ್ಲಿ ಟ್ಯಾಂಕರ್ ಹಾಗೂ ಬಿಎಂಟಿಸಿ ಬಸ್ ಮುಂದೆ ಲೇಡಿ ಕಾರು ಓಡಿಸಿಕೊಂಡು ಬಂದರು. ಆಗ ಲೇಡಿಗೆ ಟ್ಯಾಂಕರ್ ಚಾಲಕ ಬೈದಿದ್ದರು.
ನಂತರ ಕಾರ್ಪೋರೇಷನ್ ಸಿಗ್ನಲ್‌ನಲ್ಲಿ ಜನ ಹತ್ತಿಸಿಕೊಳ್ಳುವಾಗ ನಾನು ನಿಮ್ಮ ಜಗಳದಲ್ಲಿ ನಮಗೆ ಒಂದು ಸಿಗ್ನಲ್ ಹೋಯ್ತು ಅಂತಾ ನಾನು ಬೈದೆ. ಅಷ್ಟಕ್ಕೆ ಬಿಎಂಟಿಸಿ ಬಸ್ ಮುಂದೆ ಯುವತಿ ಕಾರನ್ನು ಬಸ್ ಮುಂದಕ್ಕೆ ಹೋಗದ ಹಾಗೆ ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಹೋದರು.
ಕಬ್ಬನ್ ಪೇಟೆ ಸಿಗ್ನಲ್‌ನಲ್ಲಿ ಬಸ್ ನಿಲ್ಲಿಸಿದಾಗ ನನಗೆ ಅವಾಚ್ಯ ಶಬ್ದದಿಂದ ಬೈದು ನನ್ನ ಮೇಲೆ ಹಲ್ಲೆ ಮಾಡಲು ಮುಂದಾದ್ರು. ಬಸ್‌ನಿಂದ ಕೆಳಗೆ ಇಳಿ ಅಂತಾ ಅವಾಜ್ ಕೂಡ ಹಾಕಿದ್ರು. ನನ್ನ ತಪ್ಪು ಇಲ್ಲದೇ ನಾನು ಯಾಕೆ ಕೆಳಗೆ ಇಳಿಯಬೇಕು ಅಂತ ನಾನು ಇಳಿದಿಲ್ಲ. ಯುವತಿಯ ಎಡಭಾಗಕ್ಕೆ ಬಸ್ ಚಲಾಯಿಸಿದೇ ಹೊರತು ನಾನು ಯುವತಿ ಮೇಲೆ ನುಗ್ಗಿಸಲು ಪ್ರಯತ್ನಿಸಿಲ್ಲ. ಕಬ್ಬನ್ ಪೇಟೆ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ಎಎಫ್‌ಆರ್ ಆಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಬಿಎಂಟಿಸಿ ಕೂಡ ಸ್ಪಷ್ಟನೆ ನೀಡಿದೆ. ಜೆ.ಜೆ.ನಗರದಿಂದ ನಾಗವಾರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಬಸ್‌ನ ಹಿಂಬದಿ ಬಲಭಾಗವು, ಹಿಂದಿನಿಂದ ಬರುತ್ತಿದ್ದ ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಅಪಘಾತದ ನಂತರ, ಕಾರು ಚಲಾಯಿಸುತ್ತಿದ್ದ ಮಹಿಳೆ ತನ್ನ ವಾಹನದಿಂದ ಇಳಿದು ಬಸ್‌ನ ಮುಂದೆ ನಿಂತು ಅಡ್ಡಗಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಚಾಲಕನನ್ನು ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಇಲಾಖಾ ಮಟ್ಟದ ಹೆಚ್ಚಿನ ವಿಚಾರಣೆ ಮುಂದುವರೆದಿದೆ. ತನಿಖೆಯ ಫಲಿತಾಂಶದ ಆಧಾರದಲ್ಲಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....