CRIMENEWSನಮ್ಮಜಿಲ್ಲೆ

BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗದ ಸಾರಿಗೆ ಸಂಸ್ಥೆ (BMTC) ಚಾಲಕನೊಬ್ಬ ಮದ್ಯಪಾನ ಮಾಡಿ ಬಸ್ ಚಾಲನೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಪ್ರಯಾಣಿಕ ಮಹಿಳೆ ಜತೆ ಚಾಲಕ ವಾಗ್ವಾದ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.

ನಿನ್ನೆ ಬುಧವಾರ ಮಾ. 18ರ ರಾತ್ರಿ 7:30ರ ಸುಮಾರಿಗೆ ಈ ಘಟನೆ ಟಿನ್ ಫ್ಯಾಕ್ಟರಿ ಹತ್ತಿರ ನಡೆದಿದೆ. ಚಾಲಕ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದ. ಈ ವೇಳೆ ಚಾಲಕನ ವರ್ತನೆ ಕಂಡು ಬಸ್ ನಿಲ್ಲುಸುವಂತೆ ಮಹಿಳೆ ಕೇಳಿಕೊಂಡಿದ್ದಾರೆ. ಆದರೆ, ಬಸ್‌ ನಿಲ್ಲಿಸದೆ ಆ ಮಹಿಳೆ ಜತೆ ಚಾಲಕ ವಾಗ್ವಾದ ಮಾಡಿದ್ದಾನೆ.

KA – 57 – F – 3660 ಸಂಖ್ಯೆಯ ಬಿಎಂಟಿಸಿ ಬಸ್‌ನಲ್ಲಿ ವಾಗ್ವಾದ ನಡೆದಿದೆ. ಬಸ್ ಚಾಲಕನ ವರ್ತನೆ ಕಂಡು ವಿಡಿಯೋ ಸೆರೆ ಹಿಡಿದು ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಬಸ್‌ ಚಾಲನೆ ಮಾಡುತ್ತಿದ್ದ ಚಾಲಕನ ಗಮನಿಸಿದರೆ ಮದ್ಯಪಾನ ಮಾಡಿ ಬಸ್‌ ಓಡಿಸುತ್ತಿದ್ದ ಎಂಬ ಅನುಮಾನವಿದೆ. ಆದರೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಿದರೆ ಆತ ಒತ್ತಡದಲ್ಲಿ ಡ್ಯೂಟಿ ಮಾಡುತ್ತಿದ್ದಣೆ ಅಥವಾ ಕುಡಿದು ಬಸ್‌ ಓಡಿಸುತ್ತಿದ್ದನೆ ಎಂಬ ಸತ್ಯ ಹೊರಬೀಳಲಿದೆ.

Megha
the authorMegha

Leave a Reply

error: Content is protected !!
Latest news
ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ...