Crimeನಮ್ಮಜಿಲ್ಲೆಬೆಂಗಳೂರು

BMTC: ರಾತ್ರಿ ಏಕಾಏಕಿ ಕೆಂಪಾಪುರ ಸರ್ವೀಸ್ ರಸ್ತೆಯಲ್ಲಿ ಧಗಧಗಿಸಿದ ಎಲೆಕ್ಟ್ರಿಕ್‌ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೆಬ್ಬಾಳ ಬಳಿಯ ಕೆಂಪಾಪುರ ಸರ್ವೀಸ್ ರೋಡ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್‌ ಧಗಧಗಿಸಿ ಉರಿದು ಭಸ್ಮವಾದ ಘಟನೆ ನಿನ್ನೆ (ಸೋಮವಾರ) ರಾತ್ರಿ 11:30 ಸುಮಾರು ಸಮಯದಲ್ಲಿ ಸಂಭವಿಸಿದೆ.

ಇತ್ತೀಚಿನ ದಿನಗಳಲ್ಲಿ ಸಂಸ್ಥೆಯ ಎಲೆಕ್ಷ್ರಾನಿಕ್‌ ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿಯುತ್ತಿರುವುದು ಸಾಮಾನ್ಯ ಎಂಬಂತಾಗಿದ್ದು ಬಿಡದ ಡಿಪೋನಲ್ಲಿ ಬಸ್‌ ಉರಿದ ಘಟನೆ ಮಾಸುವ ಮುನ್ನವೇ ಅದೇ ರೀತಿ ಸೋಮವಾರ ರಾತ್ರಿ ಕೆಂಪಾಪುರ ಸರ್ವಿಸ್ ರಸ್ತೆಯಲ್ಲಿ ಬಿಎಂಟಿಸಿ ಇ.ವಿ.ಬಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಭಸ್ಮವಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಸುತ್ತಲೂ ಮಂಜಿನಂತೆ ದಟ್ಟ ಹೊಗೆ ಆವರಿಸಿದೆ. ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲೇ ಇಳಿಸಿದ್ದರಿಂದ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ರಾತ್ರಿ 11.30ರವೇಳೆಗೆ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಬ್ಯಾಟರಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ತಕ್ಷಣ ಎಚ್ಚೆತ್ತುಕೊಂಡು ಬಸ್‌ನಿಂದ ಇಳಿದಿದ್ದಾರೆ.

ಇನ್ನು ಈ ದೃಶ್ಯ ಕಂಡು ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬೆಂಗಳೂರಿನ ಜೀನನಾಡಿ ಸಾರಿಗೆಯಲ್ಲೊಂದಾದ ಬಿಎಂಟಿಸಿ ಬಸ್‌ಗಳು ದಿನದ ಬೆಳ್ಳಗೆಯಿಂದಲೂ ಸಂಜೆವರೆಗೂ ಯಾವುದೇ ತಾಪವನ್ನು ಲೆಕ್ಕಿಸದೇ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಹೊತ್ತೊಯ್ಯುತ್ತಲೇ ಇರುತ್ತವೆ.

ಈ ಸಾರಿಗೆಗಳಲ್ಲಿ ಕೆಸಲ ಮಾಡುವ ಚಾಲಕ ಮತ್ತು ನಿರ್ವಾಹಕರ ಪಾಡಂತೂ ಹೇಳತೀರದಾಗಿದೆ. ಯಾವಾಗ ವಿಶ್ರಾಂತಿಗೆ ನೆಲ ಸಿಗುತ್ತದೆಯೋ ಎನ್ನುವ ಪರಿಸ್ಥಿತಿಯಲ್ಲಿರುತ್ತಾರೆ. ಈ ನಡುವೆ ಈರೀತಿ ಬಸ್‌ ಏಕಾಏಕಿ ಹೊತ್ತಿಉರಿದರೆ ಚಾಲನಾ ಸಿಬ್ಬಂದಿಯ ಪಾಡೇನು. ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳು ಇತ್ತೀಚೇಗೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಅದೇ ರೀತಿ ನಿನ್ನೆ ರಾತ್ರಿ 10.30ರ ಸುಮಾರಿಗೆ ಈ ಬಸ್‌ ಕೆಟ್ಟು ನಿಂತಿದೆ. ಹೀಗಾಗಿ ಬಸ್‌ ರಿಪೇರಿ ಮಾಡಲು ತಾಂತ್ರಿಕ ಸಿಬ್ಬಂದಿ ಬಂದಿರಬೇಕು. ಈ ವೇಳೆ ಈ ಅವಘಡ ಸಂಭವಿಸಿರಬಹುದು ಎಂದು ಕೂಡ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ.

Leave a Reply

error: Content is protected !!
LATEST
KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ