CrimeNEWSಉದ್ಯೋಗನಮ್ಮರಾಜ್ಯ

BMTC ನೌಕರರ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ನೇಮಕಾತಿಯಲ್ಲಿ ಭಾರಿ ಅಕ್ರಮ: ಚಂದ್ರಶೇಖರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಪತ್ತಿನ ಸಹಕಾರ ಸಂಘದ ಸಿಬ್ಬಂದಿಗಳ ನೇಮಕಾತಿಯಲ್ಲಿ ಅಕ್ರಮ ಎಸಗಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್ ಆರೋಪಿಸಿದ್ದಾರೆ.

ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘದ ನಿಬಂಧಕರು ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿದ್ದು, ಕೂಡಲೇ ನೇಮಕಾತಿಯನ್ನು ತಡೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರ ಸಂಘದ ಕಾಯ್ದೆ ಉಲ್ಲಂಘನೆ ಮಾಡಿ ಸಂಘದ ಆಡಳಿತ ಮಂಡಲಿಯು ಮತ್ತು ಸಂಘದ ಕಾರ್ಯದರ್ಶಿ ತಮ್ಮ ಇಚ್ಛಾನುಸಾರವಾಗಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದಾರೆ ಎಂದು ದಾಖಲೆ ಸಹಿತ ದೂರು ನೀಡಿರುವುದಾಗಿ ಚಂದ್ರಶೇಕರ್‌ ತಿಳಿಸಿದ್ದಾರೆ.

ಸಮಸ್ತ ಬಿಎಂಟಿಸಿ ನೌಕರರ ಪರವಾಗಿ ಹಾಗೂ ಅವರ ಅಭಿಪ್ರಾಯದಂತೆ ನೌಕರರ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಲಿಯ ನಿರ್ದೇಶಕರು ಹಾಗೂ ಸಂಘದ ಕಾರ್ಯದರ್ಶಿ ಒಟ್ಟಾಗಿ ಸೇರಿ ಸಹಕಾರ ಸಂಘ ಕಾಯ್ದೆ-1959 ರ ನಿಯಮಾವಳಿಗಳನ್ನು ಪಾಲಿಸದೆ ಹಿಂದಿನ ಸರ್ಕಾರದಲ್ಲಿ ಆಡಳಿತ ಮಂಡಲಿಗೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲು ಅನುಮೋದನೆ ಪಡೆದಿದೆ.

ಅದರಂತೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ನೀಡದೇ, ಸಾರಿಗೆ ಸಿಬ್ಬಂದಿಗಳಿಗೂ ಯಾವುದೇ ಘಟಕ ಅಥವಾ ಸರ್ವಾಜನಿಕವಾಗಿ ಪ್ರದರ್ಶನವಾಗುವ ರೀತಿಯಲ್ಲಿ ಜಾಹೀರಾತುಗಳನ್ನು ಹಾಕದೆ ಗೌಪ್ಯವಾಗಿ 4/6/2023 ರಂದು ಸಹಕಾರ ತರಬೇತಿ ಕೇಂದ್ರದಲ್ಲಿ ಅವರಿಗೆ ಬೇಕಾದ ಅಭ್ಯರ್ಥಿಗಳನ್ನು ಕರೆದುಕೊಂಡು ಪರೀಕ್ಷೆ ಬರೆಸಲು ಮುಂದಾಗಿದ್ದರು.

ಆ ಪರೀಕ್ಷೆ ಬರೆಸುವುದನ್ನು ಕಂಡ ಕೆಲವು ನಮ್ಮ ಸಂಸ್ಥೆಯ ನೌಕರರು ಕೂಡಲೇ ಅದನ್ನು ಖಂಡಿಸಿದಾಗ ಆ ಸಮಯಕ್ಕೆ ಪರೀಕ್ಷೆ ನಿಲ್ಲಿಸಿ ನಂತರ ಪರೀಕ್ಷೆ ಪ್ರಕ್ರಿಯೆಗಳನ್ನು ಮುಗಿಸಿದ್ದಾರೆ.

ಇದೇ ರೀತಿ ಕೆಎಸ್ಆರ್ಟಿಸಿ ಪತ್ತಿನ ಸಹಕಾರ ಸಂಘದಲ್ಲಿ ಅಕ್ರಮ ನೇಮಕಾತಿಯನ್ನು ಮಾಡಿಕೊಂಡಿದ್ದಾರೆ. ಈ ಸಂಬಂಧ ಈಗಾಗಲೇ ನೇಮಕಾತಿ ಅಕ್ರಮವಾಗಿ ನಡೆಸಿದ್ದಾರೆ ಎಂದು ನಾವು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದೇವೆ.

ಮತ್ತೆ ಬಿಎಂಟಿಸಿ ನೌಕರರ ಪತ್ತಿನ ಸಹಕಾರ ಸಂಘವು ಅದೇ ಮಾರ್ಗದಲ್ಲಿ ಅಕ್ರಮ ನೇಮಕಾತಿ ಮಾಡಿಕೊಳ್ಳಲು ಹೊರಟಿದೆ. ನಿರ್ದೇಶಕ ಮಂಡಳಿಯ ಆಡಳಿತ ಅವಧಿಯು ಇನ್ನು ಕೇವಲ 6 ತಿಂಗಳು ಇರುವ ಸಂದರ್ಭದಲ್ಲಿ ತರಾತುರಿಯಲ್ಲಿ ಈ ನೇಮಕಾತಿ ಮಾಡುತ್ತಿದಾರೆ.

ಇದು ಅಕ್ರಮವಾಗಿ ನಡೆಯುತ್ತಿದ್ದು ಈ ಕೂಡಲೆ ಬಿಎಂಟಿಸಿ ನೌಕರರ ಪತ್ತಿನ ಸಹಕಾರ ಸಂಘದಲ್ಲಿ ನಡೆಯುತ್ತಿರುವ ನೇಮಕಾತಿಯನ್ನು ನಿಲ್ಲಿಸುವಂತೆ ಸೂಚನೆ ನೀಡಬೇಕೆಂದು ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ