ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ಸಂಸ್ಥೆ ನೌಕರರು ಮುಷ್ಕರದ ಸಮಯದಲ್ಲಿ ವಜಾಗೊಂಡು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರೆಲ್ಲರೂ ಕೂಡ 50 ಲಕ್ಷ ರೂ.ಗಳ ಅಪಘಾತ ವಿಮೆ ಯೋಜನೆಯಡಿ ಬರಲಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದೆ.
ನಿನ್ನೆ ಅಂದರೆ ಮೇ 28ರಂದು ಈ ಆದೇಶ ಹೊರಡಿಸಿದ್ದು, ಇದರಿಂದ ಅಪಘಾತ ವಿಮೆಯಿಂದ ಈವರೆಗೂ ಹೊರಗುಳಿದಿದ್ದ ಈ ಎಲ್ಲ ನೌಕರರಿಗೆ ಈಗ ಸಿಹಿ ಸುದ್ದಿ ಸಿಕ್ಕಂತಾಗಿದೆ. ಅಲ್ಲದೆ ಈ ವಜಾಗೊಂಡಿದ್ದ ಎಲ್ಲ ನೌಕರರು ತಾವು ಮಾಡದ ತಪ್ಪಿಗೆ ಮುಷ್ಕರದ ಸಮಯದಲ್ಲಿ ವಜಾಗೊಂಡು ನೋವು ಅನುಭವಿಸಿದ್ದಾರೆ. ಆದರೂ ಕೆಲ ಕಿಡಿಗೇಡಿ ಅಧಿಕಾರಿಗಳು ಅವರನ್ನು ಇನ್ನಷ್ಟು ನೋಯಿಸುವ ನಿಟ್ಟಿನಲ್ಲಿ ತಮಗಿಷ್ಟ ಬಂದ ರೀತಿಯಲ್ಲಿ ನಿಯಮ ರೂಪಿಸಿ ದೌರ್ಜನ್ಯ ಎಸಗುತ್ತಿದ್ದರು.
ಆದರೆ, ಕರ್ನಾಟಕ ಹೈ ಕೋರ್ಟ್ ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ನೌಕರರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು, ಈವರೆಗೂ ಅಪಘಾತ ವಿಮೆ 50 ಲಕ್ಷ ರೂ.ಗಳು ಸಿಗದಂತಾಗಿದ್ದ ಈ ನೌಕರರಿಗೆ ಸಿಗುವಂತೆ ಮಧ್ಯಂತರ ಆದೇಶ ಮಾಡಿದೆ. ಇದು ನೊಂದಿದ್ದ ನೌಕರರ ಪಾಲಿಗೆ ಆಸರೆ ಸಿಕ್ಕಂತಾಗಿದೆ. ಅಲ್ಲದೆ ಸತ್ಯಕ್ಕೆ ಸಾವಿಲ್ಲ ಎಂಬುದನ್ನು ನಿರೂಪಿಸಿದೆ.
ಇನ್ನು ಈಗಲೂ ಸಂಸ್ಥೆಯ ಕೆಲ ಭ್ರಷ್ಟ ಅಧಿಕಾರಿಗಳ ದರ್ಪಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಇದರ ನಡುವೆ ವಜಾಗೊಂಡು ಮರಳಿ ಡ್ಯೂಟಿ ಮಾಡುತ್ತಿರುವ ನೌಕರರಿಗೆ ಈಗ ಗುಂಪು ವಿಮಾ ಯೋಜನೆಯ ಅಪಘಾತ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಪ್ರಕರಣಗಳ ಕ್ಷೇಮ್‌ಗಳನ್ನು ಸಲ್ಲಿಸಲು ಅವಕಾಶ ನೀಡಿರುವುದು ಖುಷಿಯ ವಿಚಾರ.
ಸಂಸ್ಥೆಯ ಆದೇಶ ಏನು?: ಬಿಎಂಟಿಸಿ ಸಂಸ್ಥೆಯಲ್ಲಿ ನೌಕರರ ಇಲಾಖಾ ಗುಂಪು ವಿಮಾ ಯೋಜನೆಯಡಿ ಸೇವೆಯಲ್ಲಿರುವ ಅಧಿಕಾರಿ, ನೌಕರರು ಅಪಘಾತದಲ್ಲಿ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಮರಣ ಹೊಂದಿದರೆ ₹50 ಲಕ್ಷಗಳ ಪರಿಹಾರ ಮೊತ್ತವನ್ನು ನೀಡುವ ಸಂಬಂಧ ಈಗಾಗಲೇ ಯೋಜನೆ 2024ರ ಫೆ19 ರಿಂದ ಜಾರಿಗೆ ಬಂದಿದೆ. ಈ ಸಂಬಂಧ ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ ಕ್ಷೇಮ್‌ಗಳನ್ನು ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನವನ್ನು ಈ ಹಿಂದೆಯೇ ನೀಡಲಾಗಿದೆ.
ಇನ್ನು ವಿಮಾ ಪರಿಹಾರ ಮೊತ್ತ ₹50 ಲಕ್ಷಗಳನ್ನು ವಿತರಿಸುವ ಸಂಬಂಧ ಕೆಲವೊಂದು ಪ್ರಮುಖ ಷರತ್ತುಗಳನ್ನು ಅಳವಡಿಸಿಕೊಳ್ಳಲಾಗಿದೆ. ಅದರಂತೆ ಈ ಷರತ್ತುಗಳ ಪೈಕಿ ಅನರ್ಹ ಪ್ರಕರಣಗಳಡಿ (ಅಂದರೆ ವಜಾಗೊಂಡ ನೌಕರರನ್ನು ಗುರಿಯಾಗಿಸಿಕೊಂಡು ಮಾಡಿದ ನಿಯಮ) ಕ್ರಮ ಸಂಖ್ಯೆ-2 ರಲ್ಲಿ “ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದು ನಿಯಮ ರೂಪಿಸಲಾಗಿತ್ತು.
ಆದರೆ ಈಗ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಪ್ರಕರಣದಲ್ಲಿ ಈ ಯೋಜನೆಯು ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅನ್ವಯಿಸದಿರುವುದು ಸೂಕ್ತವಲ್ಲವೆಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಪ್ರಕರಣಗಳಡಿ ನಮೂದಿಸಲಾಗಿದ್ದ ಕ್ರಮ ಸಂಖ್ಯೆ-2 ನ್ನು ಈ ಕೂಡಲೆ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಉಳಿದಂತೆ ಬಾಕಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರಿಷ್ಕೃತ ಸುತ್ತೋಲೆಯು ಈ ಕೂಡಲೇ ಜಾರಿಗೆ ಬರುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Related

You Might Also Like
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...