Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:​ ರಾಜಧಾನಿ ಜನರ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕ್ ಬಸ್​​ಗಳಿಗೆ ಕನ್ನಡ ಬರದ ಮತ್ತು ಚಾಲನೆಯ ಅನುಭವವೇ ಇಲ್ಲದ ಸಣ್ಣಪುಟ್ಟ ಮಲಯಾಳಿ ಹುಡುಗರನ್ನು ನೇಮಿಸಿಕೊಂಡು ಬಸ್ ನೀಡಿದ್ದ ಬಗ್ಗೆ ವಿಜಯಪಥ ಸಮಗ್ರ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ತನಿಖೆ ನಡೆಸಿ 50ಕ್ಕೂ ಹೆಚ್ಚು ಚಾಲಕರನ್ನು ಕೆಲಸದಿಂದ ಬಿಡಿಸಿದೆ.

ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗಳಲ್ಲಿ ಕೇರಳದ ಚಾಲಕರನ್ನು ನೇಮಕ ಮಾಡಿಕೊಂಡಿದ್ದರಿಂದ ಕನ್ನಡಿಗರಿಗೆ ಉದ್ಯೋಗವಿಲ್ಲದಂತಾಗಿತ್ತು.‌ ಇನ್ನು ಕೆಲಸಕ್ಕೆ ಸೇರಿಕೊಳ್ಳುವಾಗ 22500 ರೂ. ವೇತನ ಕೊಡುತ್ತೇವೆಂದು ಹೇಳಿ ಕೆಲಸಕ್ಕೆ ನೇಮಕಗೊಂಡ ಮೇಲೆ ಚಾಲಕರಿಗೆ ಕೇವಲ 18 ಸಾವಿರ ರೂಪಾಯಿ ಮಾತ್ರ ವೇತನ ನೀಡುತ್ತಿದೆ, ಹೀಗಾಗಿ ಇದರಿಂದ ಕನ್ನಡಿಗ ಚಾಲಕರು ಕೆಲವರು ಬಿಟ್ಟು ಹೋಗಿದ್ದು, ಸದ್ಯ ಯಾರು ಕೆಲಸಕ್ಕೆ ಬರುತ್ತಿಲ್ಲ.

ಹೀಗಾಗಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಏಜೆನ್ಸಿಗಳು ಕೇರಳದ ಹೆವಿ‌ ಲೈಸೆನ್ಸ್ ಮತ್ತು ಅನುಭವ ಇಲ್ಲದ ಚಾಲಕರಿಗೆ ಬಸ್‌ ಕೊಟ್ಟಿದ್ದವು. ಈ ಬಗ್ಗೆ ವಿಜಯಪಥ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು 50ಕ್ಕೂ ಹೆಚ್ಚು ಮಂದಿಯನ್ನು ತೆಗೆದು ಹಾಕಿದ್ದಾರೆ.

ಎಲೆಕ್ಟ್ರಿಕ್ ಬಸ್ ಕಂಪನಿಗಳು ನೇಮಕ ಮಾಡಿಕೊಂಡ ಚಾಲಕರಿಗೆ ಸರಿಯಾದ ವೇತನ ನೀಡದಿದ್ದರಿಂದ ಕಳೆದ ತಿಂಗಳು ಪ್ರತಿಭಟನೆ ಮಾಡಿ 60 ಕ್ಕU ಹೆಚ್ಚು ಚಾಲಕರು ಬಿಟ್ಟು ಹೋಗಿದ್ದಾರೆ. ಹೀಗಾಗಿ ಚಾಲಕರಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಇನ್ನು ಶಕ್ತಿ ಯೋಜನೆ ಆರಂಭವಾದ ಮೇಲೆ ಶಾಲಾ-ಕಾಲೇಜುಗಳಿಗೆ ಮತ್ತು ಕೆಲಸಕ್ಕೆ ತೆರಳುವ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬಿಎಂಟಿಸಿಯನ್ನು ಅವಲಂಬಿಸಿದ್ದಾರೆ. ಆದರೆ ಪ್ರಯಾಣಿಕರ ಸಂಖ್ಯೆಗೆ ತಕ್ಕಂತೆ ಬಸ್​ಗಳು ಬರುತ್ತಿಲ್ಲ. ಇತ್ತ ಅರ್ಧಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳು ಡಿಪೋನಲ್ಲೇ ನಿಂತಿರುವುದರಿಂದ ಸಮಸ್ಯೆಯಾಗುತ್ತಿದೆ.

ಎಲೆಕ್ಟ್ರಿಕ್ ಬಸ್​ಗಳಿಗೆ ನಾವು ಯಾರನ್ನೂ ನೇಮಕ ಮಾಡಿಕೊಂಡಿಲ್ಲ. ಇದು ಕೇಂದ್ರ ಸರ್ಕಾರದ ಯೋಜನೆ, ಎಲೆಕ್ಟ್ರಿಕ್ ಬಸ್​ಗಳಿಗೆ ಖಾಸಗಿ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಂಡಿದ್ದಾರೆ. ನಾವು ಈಗಾಗಲೇ ನೋಟಿಸ್ ನೀಡಿದ್ದೀವೆ ತನಿಖೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ