CrimeNEWSಬೆಂಗಳೂರು

BMTC ಜಮೀನು ಒತ್ತುವರಿಯಾಗಿದ್ದರೂ ಆಗಿಲ್ಲ ಎಂದು ವರದಿ ನೀಡಿದ ಸಂಸ್ಥೆ ಇಂಜಿನಿಯರ್‌ ಅಮಾನತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ ಜಮೀನು ಒತ್ತುವರಿಯಾಗಿದ್ದರೂ, ‘ಒತ್ತುವರಿಯಾಗಿಲ್ಲ’ ಎಂದು ವರದಿ ನೀಡಿದ್ದ ಆರೋಪದ ಮೇರೆಗೆ ಬಿಎಂಟಿಸಿ ಸಹಾಯಕ ತಾಂತ್ರಿಕ ಇಂಜಿನಿಯರ್‌ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.

ಸಂಸ್ಥೆಯ ಜಮೀನು, ಸ್ವತ್ತುಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಬಿಎಂಟಿಸಿ ಸ್ಥಿರಾಸ್ತಿ ಶಾಖೆಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ಇದರನ್ವಯ ‍ಬೆಂಗಳೂರು ದಕ್ಷಿಣ ತಾಲೂಕಿನ ಬೆಟ್ಟದಾಸನಪುರ ಗ್ರಾಮದ ಸರ್ವೆ ನಂಬರ್‌ 20ರಲ್ಲಿ ಸಂಸ್ಥೆಗೆ ಮಂಜೂರಾಗಿರುವ 5 ಎಕರೆ ಖಾಲಿ ಜಾಗದಲ್ಲಿ ಅನಧಿಕೃತ ಒತ್ತುವರಿ ಆಗಿಲ್ಲ ಎಂದು ಆಗ ಬಿಎಂಟಿಸಿ ಘಟಕ 19ರಲ್ಲಿ (ಎಲೆಕ್ಟ್ರಾನಿಕ್ಸ್‌ ಸಿಟಿ) ವ್ಯವಸ್ಥಾಪಕರಾಗಿದ್ದ ಕುಮಾರಸ್ವಾಮಿ 2023ರ ಅಕ್ಟೋಬರ್‌ನಲ್ಲಿ ವರದಿ ನೀಡಿದ್ದರು.

ಸ್ಥಿರಾಸ್ತಿ ಶಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಒಂದು ಎಕರೆ ಜಮೀನನ್ನು ಎಂ.ನಾರಾಯಣ ಸ್ವಾಮಿ ಅವರು ಒತ್ತುವರಿ ಮಾಡಿಕೊಂಡಿದ್ದಲ್ಲದೇ, ಕಟ್ಟಡ ಕಾಮಗಾರಿ ನಡೆಸುತ್ತಿರುವುದು ಕಂಡು ಬಂದಿತ್ತು. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.

ಸಂಸ್ಥೆಯ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿದ್ದರೂ ಜಮೀನು ಒತ್ತುವರಿಯಾಗಿಲ್ಲ ಎಂದು ಸುಳ್ಳು ವರದಿಯನ್ನು ನೀಡುವ ಮೂಲಕ ಕುಮಾರಸ್ವಾಮಿ ಅವರು ಕರ್ತವ್ಯಲೋಪ ಎಸಗಿದ್ದಾರೆ. ಈ ಕಾರಣಕ್ಕಾಗಿ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಿ, ಬಿಎಂಟಿಸಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ