ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಸುವಾಗ ಮೆರೆತು ಬಿಟ್ಟುಹೋಗಿದ್ದ ವಸ್ತುವನ್ನು ಮರಳಿ ವಾರಸುದಾರರಿಗೆ ತಲುಪಿಸುವ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ ಮತ್ತೊಮ್ಮೆ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಿಎಂಟಿಸಿ ಉತ್ತರಹಳ್ಳಿ ಘಟಕ- 33ನೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್‌ನಲ್ಲೇ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಮಿಕ್ಸರ್ ಗ್ರೈಂಡರ್‌ಅನ್ನು ಇಳಿಯುವಾಗ ಪ್ರಯಾಣಿಕ ಮಹಿಳೆಯೊಬ್ಬರು ಮರೆತು ಬಿಟ್ಟುಹೋಗಿದ್ದರು.
ಬಳಿಕ ಬಸ್‌ನಲ್ಲಿ ಮಿಕ್ಸರ್ ಗ್ರೈಂಡರ್ ಇರುವುದನ್ನು ಗಮನಿಸಿದ ಚಾಲನಾ ಸಿಬ್ಬಂದಿ ಅದನ್ನು ತಂದು ಘಟಕದಲ್ಲಿ ಇಟ್ಟಿದ್ದರು. ನಂತರ ದೂರವಾಣಿ ಮೂಲಕ ಪ್ರಯಾಣಿಕರನ್ನು ಸಂಪರ್ಕಿಸಿ ಅವರ ವಸ್ತುವನ್ನು ಘಟಕದ ಭದ್ರತಾ ಸಿಬ್ಬಂದಿ ಮುಖಾಂತರ ಹಿಂದುರಿಸಿದರು.
ಈ ಮೂಲಕ ಪ್ರಾಮಾಣಿಕತೆಯಲ್ಲಿ ಮತ್ತೊಮ್ಮೆ ಸಾರಿಗೆ ಸಂಸ್ಥೆ ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣ ಮಾಡಬೇಕಾದರೆ ಬಿಟ್ಟು ಹೋದ ವಸ್ತುವನ್ನು ಮರಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.
ಇನ್ನು ಉತ್ತರಹಳ್ಳಿ ಘಟಕ 33ರ ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಗೆ ಸಂಸ್ಥೆಯ ನೌಕರರು ಮತ್ತು ಸಾರ್ವಜನಿಕರು ಅಭಿನಂದನೆ ತಿಳಿಸಿದ್ದಾರೆ. ಅಲ್ಲದೆ ಇಂಥ ಪ್ರಾಮಾಣಿಕ ಸಿಬ್ಬಂದಿಗೆ ನ್ಯಾಯಯುತವಾಗಿ ವೇತನ ಮಂಜೂರು ಮಾಡುವುದಕ್ಕೆ ಸರ್ಕಾರ ಮತ್ತು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.