NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವಜಾಗೊಂಡು ಮತ್ತೆ ಮರಳುತ್ತಿರುವ ನೌಕರರಿಗೆ ವಸತಿ, ಊಟದ ಸಮಸ್ಯೆಯಾಗಿದ್ದರೆ ಕೂಟದ ಪದಾಧಿಕಾರಿಗಳ ಸಂಪರ್ಕಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿಯಲ್ಲಿ ಮುಷ್ಕರದ ವೇಳೆ ವಜಾಗೊಂಡು ಮತ್ತೆ ಜಂಟಿ ಮೆಮೋ ಮೂಲಕ ಕರ್ತವ್ಯಕ್ಕೆ ಮರಳುತ್ತಿರುವ ಸಾರಿಗೆ ನೌಕರರಿಗೆ ಉಳಿದುಕೊಳ್ಳುವುದಕ್ಕೆ ಮತ್ತು ಊಟಕ್ಕೆ ತೊಂದರೆ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ಈ ರೀತಿ ಸಮಸ್ಯೆಯಾಗುತ್ತಿದ್ದರೆ ಕೂಡಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳನ್ನು ಫೋನ್‌ ಮೂಲಕ ಸಂಪರ್ಕಿಸುವಂತೆ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

ಊಟ ಮತ್ತು ವಸತಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ತಾವು ನಮ್ಮನ್ನು ಈ ಫೋನ್‌ ನಂಬರ್‌ಗಳ ಮೂಲಕ ಸಂಪರ್ಕಿಸಿ (ಕೂಟದ ಅಧ್ಯಕ್ಷ ಚಂದ್ರಶೇಖರ್‌- 9686188007, ಮಹಿಳಾ ಅಧ್ಯಕ್ಷರಾದ ಚಂಪಕಾವತಿ- 8310825953, ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ – 9035894266).

ಏಪ್ರಿಲ್‌ 2021ರ ವೇಳೆ ನಡೆದ ಮುಷ್ಕರದ ಸಂದರ್ಭದಲ್ಲಿ ನೂರಾರು ನೌಕರರನ್ನು ಸಂಸ್ಥೆ ಕೆಲಸದಿಂದ ಏಕಾಏಕಿ ವಜಾಮಾಡಿತ್ತು. ಹೀಗಾಗಿ ವಜಾಗೊಂಡಿರುವ ನೌಕರರಲ್ಲಿ ಹಲವರು ಬೆಂಗಳೂರು ತೊರೆದು ತಮ್ಮ ಸ್ವಂತ ಊರುಗಳಿಗೆ ಹೋಗಿದ್ದಾರೆ. ಈಗ ಮತ್ತೆ ಕೆಲಸಕ್ಕೆ ಮರಳಲು ಸಂಸ್ಥೆ ಕರೆ ನೀಡಿರುವುದರಿಂದ ಉತ್ತರ ಕರ್ನಾಟಕ ಭಾಗದ ನೌಕರರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬರುತ್ತಿದ್ದಾರೆ.

ಸದ್ಯ ಅವರಿಗೆ ಉಳಿದು ಕೊಳ್ಳುವುದಕ್ಕೆ ಮತ್ತು ಊಟಕ್ಕೆ ಸ್ವಲ್ಪ ತೊಂದರೆ ಆಗುತ್ತಿದ್ದು ಅವರು ತಮ್ಮ ಸಹೋದ್ಯೋಗಿಗಳಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದಾರೆ. ಹೀಗಾಗಿ ಅಂಥ ಸಮಸ್ಯೆಗೆ ಸಿಲುಕಿರುವವರು ಕೂಡಲೇ ಕೂಟದ ಪದಾಧಿಕಾರಿಗಳನ್ನು ಸಂಪರ್ಕಿಸಿ ತಾತ್ಕಾಲಿಕವಾಗಿ ನಿಮಗೆ ಎಲ್ಲ ಸೌಲಭ್ಯಗಳನ್ನು ಮಾಡಿಕೊಡುತ್ತೇವೆ ಎಂದು ಚಂದ್ರಶೇಖರ್‌ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ