NEWSನಮ್ಮಜಿಲ್ಲೆನಮ್ಮರಾಜ್ಯ

BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ

ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಇಪಿಎಸ್ ಪಿಂಚಣಿದಾರರ 41ನೇ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಜತೆಗೆ ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ, ನೀಡಿ ಎಂದು ಒತ್ತಾಯ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದೊಂದು ದಶಕದಿಂದ ಇಪಿಎಸ್ ನಿವೃತ್ತರು ಶಾಂತಿಯುತವಾಗಿ, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಿ ಎಂದು ಹೋರಾಟ ನಡೆಸುತ್ತಿದ್ದು ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಜತೆಗೆ ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ, ನೀಡಿ ಎಂದು ಆಗ್ರಹಿಸಿದ್ದಾರೆ.

ಬುಧವಾರ “ನಿಧಿ ಅಪ್ಕೆನಿಕಟ್” ಕಾರ್ಯಕ್ರಮ ದಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಇಪಿಎಸ್ ಪಿಂಚಣಿದಾರರ 41ನೇ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಈ ಒತ್ತಾಯ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಾವು ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು, ಇತ್ತೀಚೆಗೆ ನಮ್ಮ ರಾಜ್ಯದ ಉಚ್ಚ ನ್ಯಾಯಾಲಯವು ಸೇರಿದಂತೆ ದೇಶದ ವಿವಿಧ ಉಚ್ಚ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಅನುಷ್ಠಾನಗೊಳಿಸಿ ಎಂದು ಹೋರಾಟ ನಡೆಸುತ್ತಿದ್ದರೂ ನಮ್ಮ ಈ ಇಳಿವಯಸ್ಸಿನವರ ಕೂಗಿ ಕೇಂದ್ರ ಸರ್ಕಾರ ಹಾಗೂ ಪಿಎಫ್‌ ಅಧಿಕಾರಿಗಳು ಕಿವಿಕೋಯ್ದ ಕೆಂಚನಂತೆ ಮೂಕರಾಗಿ ವರ್ತಿಸುತ್ತಿದ್ದಾರೆ ಎಂದು ನೆರೆದಿದ್ದ ನೂರಾರು ಇಪಿಎಸ್ ನಿವೃತ್ತರು ಕಿಡಿಕಾರಿದರು.

ಪಿಎಫ್ ಕಚೇರಿ ಆವರಣದಲ್ಲಿ ಹರತಾಳ ನಡೆಸಿ, ನಿವೃತ್ತರು ಕೂಗಿದ ಧಿಕ್ಕಾರದ ಘೋಷಣೆ ಅವರ ಆಕ್ರೋಶ ಎಷ್ಟಿದೆ ಎಂಬುದನ್ನು ಒತ್ತಿಒತ್ತಿ ಹೇಳುವಂತಿತ್ತು. ಆದರೂ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಇವರ ಕೂಗು ಕೇಳಿಸದಿರುವುದು ಭಾರಿ ನೋವಿನ ಸಂಗತಿಯಾಗಿದೆ.

ಪ್ರತಿಪಟನಾಕಾರರು ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳನ್ನು ತೀವ್ರ ತಾರಾಟೆಗೆ ತೆಗೆದುಕೊಂಡರು. ಇದುವರೆಗೂ ನಾವು ಪ್ರತಿಭಟನೆ ಮೂಲಕ 40 ಮನವಿ ಪತ್ರಗಳನ್ನು ಕೇಂದ್ರ ಸರ್ಕಾರದ ಸಚಿವರಿಗೆ ಸಲ್ಲಿಸಿದ್ದರೂ ಯಾವುದೇ ಮನವಿ ಪತ್ರಕ್ಕೂ ಕೂಡ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದ ಪಾರ್ಲಿಮೆಂಟರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜು ಬೊಮ್ಮಾಯಿ ನೇತೃತ್ವದ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಇಪಿಎಸ್ ನಿವೃತ್ತರ ಕನಿಷ್ಠ ಪಿಂಚಣಿ 7,500 ರೂ. ನೀಡಬೇಕು ಎಂದು, ಭಾರತೀಯ ಮಾಜ್ದುರ್ ಸಂಘದ ಮುಖಂಡರು ಇತ್ತೀಚೆಗೆ ಕೇಂದ್ರ ಸರ್ಕಾರದ ಸಚಿವ ಮುನ್ಸೂಖ್ ಮಾಂಡವೀಯ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಕನಿಷ್ಠ ಪಿಂಚಣಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕು. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ, ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಮ್ಮ ರಾಜ್ಯ ಉಚ್ಚ ನ್ಯಾಯಾಲಯ 30/04/ 2026 ರಂದು, ಮದುರೈ ಉಚ್ಚ ನ್ಯಾಯಾಲಯವು 02/09/2025 ರಂದು, ಕೊಲ್ಕತ್ತಾ ಉಚ್ಚ ನ್ಯಾಯಾಲಯವು 14/11/2025 ರಂದು, ಇಪಿಎಸ್ ನಿವೃತ್ತರ ಪರ ನೀಡಿರುವ ಆದೇಶ ನಮಗೂ ಅನ್ವಯವಾಗಲಿದ್ದು, ಈ ಆದೇಶವನ್ನು ಕೂಡಲೇ ಅನುಷ್ಠಾನಗೊಳಿಸಿ, ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಶಾಂತವಾಗಿರುವ “ಶಾಂತ ಸಾಗರ” ಇದು ಯಾವುದೇ ಕ್ಷಣದಲ್ಲಾದರೂ ಸುನಾಮಿಯಾಗಿ ಪರಿಣಮಿಸಬಹುದು ಎಂಬುದನ್ನು ಆಡಳಿತಗಾರರು ತಮ್ಮ ಗಮನಲ್ಲಿಟ್ಟುಕೊಳ್ಳುವುದು ಒಳ್ಳೆಯದು. 41ನೇ ಮನವಿ ಪತ್ರವನ್ನು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಕೂಡಲೇ ಕಳುಹಿಸಿ, ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ಅಧಿಕಾರಿಗಳಿಗೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಖಜಾಂಚಿ ಡೋಲಪ್ಪ, ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತರಾದ ಚಂದ್ರೇಗೌಡ, ಸಂಘದ ಪದಾಧಿಕಾರಿಗಳಾದ ಮನೋಹರ್ ಆರ್., ನಾಗರಾಜ, ರುಕ್ಮೇಶ್ ಹಾಗೂ ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಟ್ರಸ್ಟ್ ಪದಾಧಿಕಾರಿ ರಮೇಶ್ ಸೇರಿದಂತೆ ನೂರಾರು ನಿವೃತ್ತ ನೌಕರರ ಭಾಗವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರಾಜೀನಾಮೆಗೂ ಮುನ್ನ ಸಿಎಂ ಕಚೇರಿ ಸಿಬ್ಬಂದಿ ವರ್ಗಾವಣೆ: ಆಪ್ತ, ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದರ ಸಿದ್ದು!? ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ರಾಜೀನಾಮೆ ಕೊಡಿ ಅಂತ ಹೇಳಿದ್ರೆ ಕೊಡ್ತೀನಿ ಅಂದಿದ್ದೆ, ಮೊನ್ನೆ ಹೇಳಿದರು ಇಂದು ಕೊಟ್ಟೆ: ಸ... ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯರಿಂದ ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆ