NEWSನಮ್ಮರಾಜ್ಯ

BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ

ಬಿಎಂಟಿಸಿ ಹಾಲಿ ವ್ಯವಸ್ಥಾಪಕ ನಿರ್ದೇಶಕ  ಶಿವಕುಮಾರ್ ಕೆ.ಬಿ. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತ ಖಜಾನೆ ಇಲಾಖೆಯ ಕಮಿಷನರ್ ಆಗಿದ್ದ ರಘುನಂದನ್ ಮೂರ್ತಿ ಅವರಿಗೆ ಬಿಎಂಟಿಸಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, 14 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಮತ್ತು ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಗುರುವಾರ ಆದೇಶ ಹೊರಡಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲೂ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಬಿಎಂಟಿಸಿ ಹಾಲಿ ವ್ಯವಸ್ಥಾಪಕ ನಿರ್ದೇಶಕ  ಶಿವಕುಮಾರ್ ಕೆ.ಬಿ. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತ ಖಜಾನೆ ಇಲಾಖೆಯ ಕಮಿಷನರ್ ಆಗಿದ್ದ ರಘುನಂದನ್ ಮೂರ್ತಿ ಅವರಿಗೆ ಬಿಎಂಟಿಸಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜನೆ ಮಾಡಿದ್ದು, ಇದರ ಜತೆಗೆ ಖಜಾನೆ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಅವರ ಬಳಿಯೇ ಉಳಿಸಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ತುಳಸಿ ಮದ್ದಿನೇನಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಇವರ ಸ್ಥಾನಕ್ಕೆ ನಿಯೋಜನೆಗಾಗಿ ಕಾಯುತ್ತಿದ್ದ ಡಾ. ಪ್ರಸಾದ್ ಎನ್.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.

ದೆಹಲಿಯ ಕರ್ನಾಟಕ ಭವನದ ವಾಸಿ ಕಮಿಷನರ್ ಆಗಿದ್ದ ಇಮ್ಮೊಂಗ್ಲಾ ಜಮೀರ್ ಎಂ. ಅವರನ್ನು ಅದೇ ಭವನದ ಸಮನ್ವಯ ವಿಭಾಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಮೀರ್ ಶುಕ್ಲಾ ಅವರನ್ನು ದೆಹಲಿಯ ಕರ್ನಾಟಕ ಭವನದ ವಾಸಿ ಕಮಿಷನರ್ ಆಗಿ ಹೊಸದಾಗಿ ನಿಯೋಜಿಸಲಾಗಿದೆ.

ಸಮೀರ್ ಶುಕ್ಲಾ ಅವರ ಜಾಗಕ್ಕೆ ಅದೇ ಇಲಾಖೆಯಲ್ಲಿ ಪಂಚಾಯತ್ ರಾಜ್ ಕಾರ್ಯದರ್ಶಿಯಾಗಿದ್ದ ಆರ್. ದೀಪ್ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಿ ನಿಯೋಜಿಸಿದ್ದು, ಅವರಿಗೆ ಪಂಚಾಯತ್ ರಾಜ್ ವಿಭಾಗದ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ಇನ್ನು ಎಂಎಸ್‌ಎಂಇ ನಿರ್ದೇಶಕರಾಗಿದ್ದ ಡಾ. ಸತೀಶ ಬಿ.ಸಿ. ಅವರನ್ನು ಕೃಷಿ ಇಲಾಖೆಯ ಕಮಿಷನರ್ ಆಗಿ ವರ್ಗಾಯಿಸಿದ್ದು, ಇವರ ಜಾಗಕ್ಕೆ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಎಂಎಸ್‌ಎಂಇ ನೂತನ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಪ್ರಸ್ತುತ ಬಿಡಿಎ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮೇಜ‌ರ್ ಮಣಿವಣ್ಣನ್ ಪಿ. ಅವರಿಗೆ ನಗರ ಭೂ ಸಾರಿಗೆ ನಿರ್ದೇಶನಾಲಯದ ಕಮಿಷನರ್ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಅದೇ ರೀತಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ. ರಾಮ್ ಪ್ರಸಾತ್ ಮನೋಹರ್ ವಿ. ಅವರಿಗೆ ಪ್ರವಾಸೋದ್ಯಮ ಇಲಾಖೆಯ ಕಮಿಷನರ್ ಆಗಿ ಹೆಚ್ಚುವರಿ ಪ್ರಭಾರ ನೀಡಲಾಗಿದೆ.

ಇತ್ತ ಮೊನ್ನೆ ಕೆಎಸ್‌ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ವರ್ಗಾವಣೆಗೊಂಡು ಹುದ್ದೆಗಾಗಿ ಕಾಯುತ್ತಿದ್ದ ಅಕ್ರಮ್ ಪಾಷಾ ಅವರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಿಷನ್ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ನಿಗಮಗಳ ಜತೆಗೆ ನಿತೀಶ್ ಕೆ. ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಿಸುವುದರ ಜತೆಗೆ ಬೃಹತ್ ಬೆಂಗಳೂರು ಪ್ರಾಧಿಕಾರದ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಕಮಿಷನರ್ ಆಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಕೊನೆಯದಾಗಿ, ಯುವ ಐಎಎಸ್ ಅಧಿಕಾರಿ ಗಜಾನನ ಬಾಲೆ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಪರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದು ಎಲ್ಲ ಅಧಿಕಾರಿಗಳಿಗೂ ತಕ್ಷಣವೇ ಹೊಸ ಹುದ್ದೆಗಳ ಜವಾಬ್ದಾರಿ ವಹಿಸಿಕೊಳ್ಳಲು ಸೂಚಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ...