NEWSಬೆಂಗಳೂರು

BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ಸಲ್ಲಿಸಿ

ಸಂಸ್ಥೆಯಲ್ಲಿ ಸೇವಾವಿಮುಕ್ತಿಗೊಂಡ ಸಿಬ್ಬಂದಿಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಪಾವತಿಸಲು ಎಲ್ಲ ಸೇವಾ ವಿಮುಕ್ತಿ (ನಿವೃತ್ತಿ, ಸ್ವಯಂ ನಿವೃತ್ತಿ, ರಾಜೀನಾಮೆ, ವಜಾ, ನಿಧನ) ಸಿಬ್ಬಂದಿಗಳನ್ನು ಸಂಪರ್ಕಿಸಿ ಅವರ ಪ್ರಸ್ತುತ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ವಿವರಗಳ ನಕಲು ಪ್ರತಿಯನ್ನು ಪಡೆದುಕೊಂಡು (ನಿಧನ ಪ್ರಕರಣಗಳಲ್ಲಿ ನಾಮನಿರ್ದೇಶಿತರ ಪಾಸ್ ಪುಸ್ತಕದ ಪ್ರತಿಯನ್ನು ಪಡೆದುಕೊಳ್ಳುವುದು) ಈ ಆರ್.ಟಿ.ಜಿ.ಎಸ್ ನಮೂನೆಯಲ್ಲಿ ಭರ್ತಿ ಮಾಡಿ ದೃಡೀಕರಿಸಿ 18.06.2026 ರೊಳಗೆ ಕೇಂದ್ರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೇವಾ ವಿಮುಕ್ತಿ ಸಿಬ್ಬಂದಿಗಳು ಏಪ್ರಿಲ್‌-2018 ರಿಂದ ಜುಲೈ-2018ರವರೆಗಿನ ಮೂಲ ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆಯ ಹಿಂಬಾಕಿ ಮೊತ್ತವನ್ನು ಪಡೆಯುವುದಕ್ಕೆ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲುಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸೂಚನೆ ಹೊರಡಿಸಿದೆ.

ಇಂದು ಆದೇಶ ಹೊರಡಿಸಿರುವ ನಿಗಮದ ಮುಖ್ಯಲೆಕ್ಕಾಧಿಕಾರಿ 01.07.2017 ರಲ್ಲಿದ್ದ ಶೇ.45.25 ರಷ್ಟು ತುಟ್ಟಿಭತ್ಯೆಯನ್ನು 01.04.2018ರಿಂದ ಜಾರಿಗೆ ಬರುವಂತೆ ಮೂಲ ತುಟ್ಟಿಭತ್ಯೆಯನ್ನಾಗಿ ಪರಿಗಣಿಸುವ ಮತ್ತು ಮಂಜೂರಾಗಿರುವಂತೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆಯ ದರಗಳನ್ನು ಸಂಸ್ಥೆಯಲ್ಲಿ ಅಳವಡಿಸಿಕೊಳ್ಳಲು ಸುತ್ತೋಲೆಗಳನ್ನು ಹೊರಡಿಸಲಾಗಿದ್ದು, ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ ಹಿಂಬಾಕಿ ಮೊತ್ತಗಳ ಪಾವತಿಯ ಬಗ್ಗೆ ಆದೇಶಿಸಿದೆ.

ಈ ಮೊತ್ತವನ್ನು ಮುಂದುವರಿದಂತೆ, ಸಂಸ್ಥೆಯಲ್ಲಿ ಸೇವಾವಿಮುಕ್ತಿಗೊಂಡ ಸಿಬ್ಬಂದಿಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಪಾವತಿಸಲು ಎಲ್ಲ ಸೇವಾ ವಿಮುಕ್ತಿ (ನಿವೃತ್ತಿ, ಸ್ವಯಂ ನಿವೃತ್ತಿ, ರಾಜೀನಾಮೆ, ವಜಾ, ನಿಧನ) ಸಿಬ್ಬಂದಿಗಳನ್ನು ಸಂಪರ್ಕಿಸಿ ಅವರ ಪ್ರಸ್ತುತ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ವಿವರಗಳ ನಕಲು ಪ್ರತಿಯನ್ನು ಪಡೆದುಕೊಂಡು (ನಿಧನ ಪ್ರಕರಣಗಳಲ್ಲಿ ನಾಮನಿರ್ದೇಶಿತರ ಪಾಸ್ ಪುಸ್ತಕದ ಪ್ರತಿಯನ್ನು ಪಡೆದುಕೊಳ್ಳುವುದು) ಈ ಆರ್.ಟಿ.ಜಿ.ಎಸ್ ನಮೂನೆಯಲ್ಲಿ ಭರ್ತಿ ಮಾಡಿ ದೃಡೀಕರಿಸಿ 18.06.2026 ರೊಳಗೆ ಕೇಂದ್ರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ ಕೂಡಲೇ ಮಾಹಿತಿಯನ್ನು ಕಲೆಹಾಕಿ ನಿಗದಿತ ನಮೂನೆಯಲ್ಲಿ ಆರ್.ಟಿ.ಜಿ.ಎಸ್ ಪಟ್ಟಿಯನ್ನು ತಯಾರಿಸಿ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಕೇಂದ್ರ ಕಚೇರಿಯ ಲೆಕ್ಕಪತ್ರ ಇಲಾಖೆಗೆ ಸಲ್ಲಿಸಲು ಈ ಮೂಲಕ ಆದೇಶಿಸಲಾಗಿದೆ ಎಂದು ಮುಖ್ಯ ಲೆಕ್ಕಾಧಿಕಾರಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ...