NEWSನಮ್ಮಜಿಲ್ಲೆಬೆಂಗಳೂರು

BMTC: 2024ರ ವರ್ಷಾರಂಭದಲ್ಲೇ 4.37 ಕೋಟಿ ರೂ.ಆದಾಯ – ನಿಗಮಕ್ಕೆ ಸಿಹಿಯೋ ಸಿಹಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2024ರ ಹೊಸ ವರ್ಷದ ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ ಸಿಹಿಯನ್ನು ನೀಡಿದೆ. ಹೌದು! ವರ್ಷದ ಮೊದಲ ದಿನವೇ ಬಿಎಂಟಿಸಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಜ.1 ರಂದು ನಿಗಮದಲ್ಲಿ 27,09, 659 ಮಂದಿ ಪ್ರಯಾಣ ಮಾಡಿದ್ದಾರೆ.

ಈ ಮೂಲಕ ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿದ್ದವವರು ಬಿಎಂಟಿಸಿ ಓಡಿಸಿದ್ದ ಹೆಚ್ಚುವರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದರ ಪರಿಣಾಮ ಸೋಮವಾರ ಒಂದೇ ದಿನ ಬಿಎಂಟಿಸಿಗೆ 4,37,70,000 ರೂ. ಆದಾಯ ಬಂದಿದೆ.

ನ್ಯೂ ಇಯರ್ ವೆಲ್‌ಕಮ್‌ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕೆ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಹೆಚ್ಚುವರಿ ಬಸ್‌ ಸೇವೆ ಒದಗಿಸಿತ್ತು.

ಮಹಾತ್ಮಗಾಂಧಿ ರಸ್ತೆ (ಎಂ.ಜಿ.ರೋಡ್), ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ನಿಲ್ದಾಣದಿಂದ ಬಸ್‌ ಸೇವೆಯನ್ನು ಬಿಎಂಟಿಸಿ ಕಲ್ಪಿಸಿತ್ತು.

ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ಸೇವೆ ನಿಯೋಜಿಸಿದ್ದರಿಂದ ಬಿಎಂಟಿಸಿಯ ಬಸ್‌ಗಳಲ್ಲಿ ಲಕ್ಷಾಂತರ ಜನ ಪ್ರಯಾಣಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸುವುದಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್