CRIMENEWSನಮ್ಮರಾಜ್ಯ

BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ:  ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ ಹೊಡೆದ ಘಟನೆ ಸಂಬಂಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾನುವಾರ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಇದೇ ರೀತಿಯ ಘಟನೆಗಳು ನಮ್ಮ ಸಾರಿಗೆ ಸಿಬ್ಬಂದಿ ಮೇಲೆ ಆಗಾಗ ಮರುಕಳಿಸುತ್ತಲೇ ಇವೆ. ಜನರಿಗಾಗಿ ಸೇವೆ ನೀಡುವ ನಮ್ಮ ನೌಕರರ ಮೇಲಿನ ಹಲ್ಲೆ ತಡೆಗೆ ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿ ಮೇಲೆ ಹಲ್ಲೆ, ಅವಮಾನ ಮಾಡಿದ ಬೆನ್ನಲ್ಲೆ ರಾಮಲಿಂಗಾ ರೆಡ್ಡಿ ಅವರು ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ನಾನು ಪೊಲೀಸ್ ಆಯುಕ್ತರು ಬೆಂಗಳೂರು ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿದ್ದೇನೆ. ಈ ಎಲ್ಲ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನು ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿ ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ಮಾಡಿದ್ದಾರೆ. ಈ ಹಿಂದೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಾಲ್ಕೂ ನಿಗಮಗಳ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.

ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸುವಂತೆ ಗೃಹ ಸಿಚುವರು ಹಾಗೂ ಪೊಲೀಸ್‌ ಆಯಕ್ತರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ