NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸರಿಯಾಗಿ ಕೊಡುತ್ತಿಲ್ಲ, ವಸತಿ ಸೌಲಭ್ಯ ಕಲ್ಪಿಸಿಲ್ಲ ಮತ್ತು ವಿವಿಧ ಹಂತಗಳಲ್ಲಿ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಇಂದು ಬೆಳಗ್ಗೆ ದಿಢೀರ್‌ ಪ್ರತಿಭಟನೆ ನಡೆಸಿದರು.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ತೆಗೆದುಕೊಳ್ಳಲಾಗಿದೆ. ಉದ್ಯೋಗ ನೀಡುವಾಗ ಪ್ರತಿ ತಿಂಗಳು 26,000 ರೂ. ವೇತನ ನೀಡುವುದಾಗಿ ಕಂಪನಿ ಹೇಳಿತ್ತು. ಆದರೆ ಕೇವಲ 18,000 ರೂ. ಸಂಬಳ ನೀಡುತ್ತಿದೆ. ಆರಂಭದಲ್ಲಿ ಪಿಎಫ್‌ಗೆ ಹಣ ಕಡಿತ ಮಾಡಲಾಗುತ್ತದೆ ಎಂದು ಹೇಳಿತ್ತು. ಅದೇರೀತಿ ಕಡಿತ ಮಾಡಲಾಗುತ್ತಿದೆ ಆದರೆ ಪಿಎಫ್‌ಗೆ ನಮ್ಮ ಹಣವನ್ನು ಹಾಕುತ್ತಿಲ್ಲ.

ಮೊದಲ ಎರಡು ತಿಂಗಳು 2,000 ರೂ. ಕಡಿತ ಮಾಡಿದ್ದರೆ ಈಗ ಈ ತಿಂಗಳ ಸಂಬಳದಲ್ಲಿ 5,000 ರೂ. ಕಡಿತ ಮಾಡಲಾಗಿದೆ. ಈ ತಿಂಗಳು ಕೆಲವರಿಗೆ ಮಾತ್ರ ಸಂಬಳ ನೀಡಿದ್ದರೆ ಉಳಿದ ನೌಕರರಿಗೆ ಸಂಬಳವೇ ಆಗಿಲ್ಲ. ಆರಂಭದಲ್ಲಿ ಟಾಟಾ ಕಂಪನಿಯಲ್ಲಿ ಚಾಲಕರಾಗಿ ನೇಮಕ ಮಾಡಲಾಗುವುದು ಎಂದು ಹೇಳಿತ್ತು. ಆದರೆ ಈಗ ಆರ್ಯ ಹೆಸರಿನ ಕಂಪನಿಯಲ್ಲಿ ಕೆಲಸ ನೀಡಲಾಗಿದೆ. ವಸತಿ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ನಮಗೆ ವಸತಿ ನೀಡಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.

ಬಿಎಂಟಿಸಿ ವ್ಯಾಪ್ತಿಗೆ ಬರಲ್ಲ: ಡಿಪೋ- 3 ರಲ್ಲಿ 106 ಎಲೆಕ್ಟ್ರಿಕ್ ಬಸ್ಸುಗಳಿವೆ. ಮೂರು ಶಿಫ್ಟ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರು ಕೆಲಸ ಮಾಡುತ್ತಿದ್ದಾರೆ. ಈ ಎಲೆಕ್ಟ್ರಿಕ್ ಬಸ್ ಚಾಲಕರು ಬಿಎಂಟಿಸಿ ಸಂಸ್ಥೆಯ ಅಧೀನಕ್ಕೆ ಒಳಪಡುವುದಿಲ್ಲ. ಎಲೆಕ್ಟ್ರಿಕ್ ಬಸ್ ನೋಡಿಕೊಳ್ಳುವ ಕಂಪನಿಯೇ ಚಾಲಕರನ್ನು ನೇಮಕ ಮಾಡಿಕೊಳ್ಳಬೇಕೆಂಬ ನಿಯಮವಿದೆ. ಈ ಕಾರಣಕ್ಕೆ ಖಾಸಗಿ ಕಂಪನಿಯ ಮಾನಂದಂಡಕ್ಕೆ ಅನುಗುಣವಾಗಿ ಸಂಬಳ ನಿಗದಿ ಮಾಡಿದೆ ಎಂದು ನಿಗಮದ ಅಧಿಕಾರಿಗಳು ಹೇಳುತ್ತಾರೆ.

ಇನ್ನು ನಮಗೆ ವೇತನವಾಗಿಲ್ಲ ಎಂದು ಕೇಳಿದರೆ ಇಷ್ಟವಿದ್ದರೆ ಕೆಲಸ ಮಾಡಿ ಇಲ್ಲ ಬಿಟ್ಟುಹೋಗಿ ಎಂದು ನಮಗೆ ಬೆದರಿಕೆಹಾಕುತ್ತಾರೆ. ಅಲ್ಲದೆ ಒಂದು ಮಿರರ್‌ ಒಡೆದುಹೋದರೆ ನಮ್ಮ ವೇತನದಲ್ಲೇ ಕಡಿತಮಾಡಿಕೊಳ್ಳುತ್ತಾರೆ. ವಸತಿ ಕಲ್ಪಿಸುತ್ತೇವೆ ಎಂದು ಹೇಳಿದ್ದರು, ಈಗ ನಾವು ಎಲ್ಲೆಲ್ಲೋ ಮಲಗಿಕೊಂಡು ಬರುವಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಅಲ್ಲದೆ ನಮಗೆ ಸರಿಯಾದ ನೀರು ಕೂಡ ಸಿಗುವುದಲ್ಲ. ಸ್ಥಾನ ಮಾಡುವುದಕ್ಕೆ ಕುಡಿಯುವುದಕ್ಕೆ ಸರಿಯಾದ ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ನಮ್ಮನ್ನು ನೇಮಕ ಮಾಡಿಕೊಳ್ಳುವಾಗ ಹೇಳಿದ ಯಾವುದು ಪಾಲನೆಯಾಗುತ್ತಿಲ್ಲ. ಚಾಲಕರು ಎಂದರೆ ಅಷ್ಟು ಅಸಡ್ಡೆನಾ ಎಂದು ಕಿಡಿಕಾರಿದರು.

ಇದನ್ನೂ ಓದಿ- BMTC: ₹42 ಸಾವಿರ ಬದಲಿಗೆ ₹20 ಸಾವಿರ ವೇತನ ಹಾಕಿದ್ದಕ್ಕೆ ಸಿಟ್ಟಿಗೆದ್ದ ಎಲೆಕ್ಟ್ರಿಕ್‌ ಬಸ್‌ ಚಾಲಕರು – ಬಸ್‌ನಿಲ್ಲಿಸಿ ಪ್ರತಿಭಟನೆ

ಇನ್ನು ನೌಕರರು ಮಂಗಳವಾರ ಬೆಳಗ್ಗೆಯಿಂದ ಬಸ್‌ಗಳನ್ನು ಡಿಪೋನಿಂದ ಹೊರಗಡೆ ತೆಗೆಯದೆ ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಮಧ್ಯಾಹ್ನದ ವೇಳಗೆ ಸ್ಥಳಕ್ಕೆ ಬಂದ ಬಿಎಂಟಿಸಿ ಅಧಿಕಾರಿಗಳು ಸಂಧಾನ ಮಾಡಿದ ಬಳಿಕ ಚಾಲಕರು ಪ್ರತಿಭಟನೆ ಕೈಬಿಟ್ಟರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು