BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ

ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಉಳಿಸಿಕೊಂಡಿರುವ ಸರ್ಕಾರ ನೌಕರರಿಗೆ ಸಮಸ್ಯೆ ಮೇಲೆ ಸಮಸ್ಯೆ ಇದ್ದರು ಜಾಣ ಮೌನ ತಾಳಿದೆ.
ಆದರೆ, ಸಾರ್ವಜನಿಕ ಪ್ರಯಾಣಿಕರಿಗೆ ಮಾತ್ರ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುವಲ್ಲಿ ಮಾತ್ರ ಹಿಂದೆ ಬಿದ್ದಲ್ಲ. ಹೌದು! ಎಲ್ಲವೂ ಅಂದುಕೊಂಡಂತಾದರೆ ಬರುವ ಇನ್ನೈದು ತಿಂಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳು ಮಾತ್ರವಲ್ಲ; “ನಮ್ಮ ಮೆಟ್ರೋ’ ಕಾರ್ಡ್‌ಗಳನ್ನೂ ತೋರಿಸಿ “ನಮ್ಮ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಭಾಗ್ಯವನ್ನು ಕರುಣಿಸುತ್ತಿದೆ.
ಈಗಾಗಲೇ ನಗದು ರಹಿತ ಟಿಕೆಟ್ ವ್ಯವಸ್ಥೆ ಜಾರಿಯಾಗಿದೆ. ಇದರ ಮುಂದುವರಿದ ಭಾಗವಾಗಿ ಸುಮಾರು 10 ಸಾವಿರ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರ (ಇಟಿಎಂ) ಗಳನ್ನು ಅಳವಡಿಸಿಕೊಳ್ಳಲು ಬಿಎಂಟಿಸಿ ಮುಂದಾಗಿದೆ. ಈ ಸಂಬಂಧ ಟೆಂಡರ್ ಆಹ್ವಾನಿಸಿದೆ. ಹಲವು ಕಂಪನಿಗಳು ಇದರಲ್ಲಿ ಭಾಗವಹಿಸಿದ್ದು, ಇದೇ ಮೇ 13ರಂದು ಟೆಂಡರ್ ಕೂಡ ಕೊನೆಗೊಂಡಿದೆ.
ಇನ್ನು ಈ ಟೆಂಡರ್ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಇಟಿಎಂಗಳ ತಯಾರಿಕೆ ಮತ್ತು ಪೂರೈಕೆ ಪ್ರಕ್ರಿಯೆ ಶುರುವಾಗಲಿದೆ. ಬರುವ ಅಕ್ಟೋಬರ್-ನವೆಂಬರ್ ವೇಳೆಗೆ ಈ ಇಟಿಎಂಗಳು ಬಿಎಂಟಿಸಿ ಬಸ್ ನಿರ್ವಾಹಕರ ಕೈಸೇರಲಿವೆ. ಈಗಾಗಲೇ ಈ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಜಾರಿಗೊಳಿಸಿದೆ.
ಬಿಎಂಟಿಸಿಯಲ್ಲಿ ಕೂಡ ಈಗಾಗಲೇ ಸ್ಟಾಟಿಕ್ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಾವತಿಸಿ ಪ್ರಯಾಣಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ವ್ಯವಸ್ಥೆಯಲ್ಲಿ ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳನ್ನು ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಇಲ್ಲ.
ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬಿಎಂಟಿಸಿ ಆ್ಯಂಡ್ರಾಯ್ಡ್ ಸೌಲಭ್ಯದ ವಿದ್ಯುನ್ಮಾನ ಟಿಕೆಟ್ ಯಂತ್ರ (ಇಟಿಎಂ)ಗಳನ್ನು ನೀಡಲಾಗುತ್ತಿದ್ದು, ಇದಕ್ಕೆ ಗೂಗಲ್ ಪೇ, ಫೋನ್ ಪೇ, ಭೀಮ್‌ನಂತಹ ಯುಪಿಐ ಡೈನಮಿಕ್ ಕ್ಯೂ ಆರ್ ಕೋಡ್ ವ್ಯವಸ್ಥೆ ಜತೆಗೆ ಮೆಟ್ರೋ ಕಾರ್ಡ್, ಡೆಬಿಟ್, ಕ್ರೆಡಿಟ್, ವೀಸಾ, ಕೇಂದ್ರ ಸರ್ಕಾರದ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಸೇರಿದಂತೆ ಎಲ್ಲ ಬಗೆಯ ಕಾರ್ಡ್‌ಗಳಿಂದ ಟಿಕೆಟ್ ಪಡೆಯಬಹುದು.
ವಿಶೇಷವೆಂದರೆ ಟಿಕೆಟ್ ವೇಗವಾಗಿ ಮುದ್ರಣ ವಾಗುತ್ತದೆ. ಟಚ್ ಸ್ಕ್ರೀನ್ ಮತ್ತು ವೇಗದ ಪ್ರಕ್ರಿಯೆ ವ್ಯವಸ್ಥೆಗಳನ್ನು ಈ ಸ್ಮಾರ್ಟ್ ಇಟಿಎಂ ಹೊಂದಿರಲಿದ್ದು, ಡೈನಮಿಕ್ ಕ್ಯೂ ಆರ್ ಕೋಡ್ ಆಧಾರಿತ ಪಾವತಿ ಸುಲಭವಾಗಿ ಟಿಕೆಟ್ ನೀಡುವುದಕ್ಕೆ ಅನುಕೂಲವಾಗಲಿದೆ. ಈ ಟೆಂಡರ್‌ನಲ್ಲಿ ಹಲವು ಕಂಪನಿಗಳು ಭಾಗವಹಿಸಿದ್ದು, ಕಡಿಮೆ ದರದಲ್ಲಿ ಯಂತ್ರ ನೀಡಲು ಮುಂದಾಗುವ ಕಂಪನಿ ಬಳಿ ಸ್ಮಾರ್ಟ್ ಇಟಿಎಂ ಯಂತ್ರವನ್ನು ಪಡೆಯಲಾಗುವುದು. ಬಾಡಿಗೆ ಆಧಾರದಲ್ಲಿ ಈ ಯಂತ್ರಗಳ ಸೇವೆ ಇರಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಿಕೆಟ್ ಬೇಗ ಮುದ್ರಣ- ಸಚಿವ ರಾಮಲಿಂಗಾರೆಡ್ಡಿ: ಬಸ್ ಭರ್ತಿಯಾದಾಗ ಎಲ್ಲರಿಗೂ ಟಿಕೆಟ್ ಹಾಗೂ ಚಿಲ್ಲರೆ ಕೊಡುವುದು ನಿರ್ವಾಹಕರಿಗೆ ಹೆಚ್ಚಿನ ಸಮಯ ಹಿಡಿಯುವುದಲ್ಲದೆ, ತ್ರಾಸದಾಯಕವಾಗಿದೆ. ಕೆಲವು ಬಾರಿ ಚಿಲ್ಲರೆ ವಿಷಯಕ್ಕೆ ಪ್ರಯಾಣಿಕರು ನಿರ್ವಾಹಕ ನಡುವೆ ಜಗಳ ನಡೆದ ಘಟನೆಗಳೂ ಇವೆ. ಹಿಂದೆ ಇಟಿಎಂ ಪರಿಚಯಿಸುವ ಮೂಲಕ ಟಿಕೆಟ್ ನೀಡುವ ಪದ್ಧತಿಯನ್ನು ಕೊನೆಗೊಳಿಸಿತ್ತು.
ಈಗ ಹಳೆಯ ಮಷಿನ್‌ಗಳ ಬದಲಾಗಿ ಆಧುನಿಕ ತಂತ್ರಜ್ಞಾನ ಇರುವ ಸುಧಾರಿತ ಮಷಿನ್‌ಗಳನ್ನು ಜಾರಿಗೊಳಿಸಲು ಸಂಸ್ಥೆ ಮಹತ್ವದ ಹೆಜ್ಜೆ ಇರಿಸಿದ್ದು, ಅಕ್ಟೋಬರ್ ಅಥವಾ ನವೆಂಬರ್ ಒಳಗೆ ಸುಧಾರಿತ ಇಟಿಎಂ ಯಂತ್ರ ನಿರ್ವಾಹಕರ ಕೈ ಸೇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನಗದು ರಹಿತ ಟಿಕೆಟ್ ವ್ಯವಸ್ಥೆ ಜಾರಿಗಾಗಿ ಬಾಡಿಗೆ ಆಧಾರದಲ್ಲಿ 10 ಸಾವಿರ ಸುಧಾರಿತ ಆಧುನಿಕ ತಂತ್ರಜ್ಞಾನ ಇರುವ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರ (ಇಟಿಎಂ) ಗಳನ್ನು ಬಿಎಂಟಿಸಿಯಲ್ಲಿ ಅನುಷ್ಠಾನಗೊಳಿಸಲು ಈಗಾಗಲೇ ಟೆಂಟರ್ ಕರೆಯಲಾಗಿದ್ದು ಅದು ಕೂಡ ಮೇ 13ರಂದು ಕೊನೆಗೊಂಡಿದೆ.
ಇನ್ನು ಈ ಟೆಂಡರ್‌ನಲ್ಲಿ ಕಡಿಮೆ ದರದಲ್ಲಿ ಯಂತ್ರ ನೀಡಲು ಮುಂದಾಗಿರುವ ಕಂಪನಿಯಿಂದ ಹಂತ ಹಂತವಾಗಿ ಇಟಿಎಂಗಳನ್ನು ಖರೀದಿಸಿ ಅಕ್ಟೋಬರ್ ಅಥವಾ ನವೆಂಬರ್ ಒಳಗೆ ನಿರ್ವಾಹಕರಿಗೆ ನೀಡುತ್ತೇವೆ. ಹಿಂದೆ ಟಿಕೆಟ್ ಮುದ್ರಣವಾಗಲು ತಡವಾಗುತ್ತಿತ್ತು. ಆದರೆ, ಈ ಹೊಸ ಸ್ಮಾರ್ಟ್ ಇಟಿಎಂ ಯಂತ್ರದಲ್ಲಿ ಟಿಕೆಟ್ ಬೇಗ ಮುದ್ರಣವಾಗುತ್ತದೆ. ಇದರಿಂದ ನಿರ್ವಾಹಕರಿಗೆ ಕಿರಿಕಿರಿ ಉಂಟಾಗುವುದಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.
Related

1 Comment
Leave a Reply Cancel reply
You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಸರ್ಕಾರದವರು ಏನೇ ಯೋಜನೆ ಮಾಡಿ ಎಲ್ಲರಿಗೂ ಫ್ರೀ ಕೊಟ್ಟು ಹಾಳಾಗಿ ಹೋಗ್ಲಿ, ಮೊದಲು ದುಡಿಯುವ ನೌಕರರಿಗೆ ಸರಿ ಸಮಾನ ವೇತನ ಕೊಟ್ಟು ಮಾತನ್ನು ಉಳಿಸಿಕೊಳ್ಳಿ ,ಇಲ್ಲಾಂದ್ರೆ ಅವನು ಯಡಿಯೂರಪ್ಪಗೆ ಬಂದ ಗತಿಯೇ ನಿಮಗೂ ಬರುತ್ತೆ