NEWSನಮ್ಮಜಿಲ್ಲೆನಮ್ಮರಾಜ್ಯ

BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನ್‌ಲೈನ್‌ನಲ್ಲಿ ರಜೆ ಹಾಕುವ (Leave Management System (LMS) ಇದೇ ನವೆಂಬರ್‌ 1ರಿಂದ ಕೈಕೊಟ್ಟಿದೆ. ಆದರೆ ತಾತ್ಕಾಲಿಕವಾಗಿ ಬದಲಿ ವ್ಯವಸ್ಥೆಯೊಂದನ್ನು ಮಾಡಲಾಗಿದೆ. ಅದರಲ್ಲಿ ರಜೆ ಮಂಜೂರಾಗದೆ ನೌಕರರು ಸಮಸ್ಯೆಯಲ್ಲಿ ಸಿಲುಕಿದ್ದಾರೆ.

ಈ ಸಂಬಂಧ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರಿಗೂ ನೌಕರರು ದೂರು ನೀಡಿದ್ದು ಕೂಡಲೇ ಸರಿ ಪಡಿಸಿಕೊಂಡಿ ಎಂದು ಮನವಿ ಮಾಡಿದ್ದಾರೆ. ಆದರೆ, ಕಳೆದ 7 ದಿನಗಳಿಂದಲೂ ವ್ಯವಸ್ಥೆ ಸರಿಯಾಗದೆ ನೌಕರರು ರಜೆ ಪಡೆಯುವುದಕ್ಕೆ ಮರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾತ್ಕಾಲಿಕವಾಗಿ ಬಿಟ್ಟಿರುವ LMSನಲ್ಲಿ ರಜೆ ಹಾಕಲು ಹೋದರೆ ನೀವು ಕಳೆದ ತಿಂಗಳು 22 ದಿನಗಳು ಡ್ಯೂಟಿ ಮಾಡಿಲ್ಲ ಹೀಗಾಗಿ ನಿಮಗೆ ರಜೆ ಹಾಕುವುದಕ್ಕೆ ಆಗುವುದಿಲ್ಲ ನಿಮ್ಮ ಘಟಕ ವ್ಯವಸ್ಥಾಪಕರನ್ನು ಸಂಪರ್ಕಿಸಿ ಎಂದು ಬರುತ್ತಿದೆ.

ಅಂದರೆ, ಘಟಕದಲ್ಲಿ 22 ದಿನ ಕೆಲಸ ಮಾಡಿದ್ದರು ಕೂಡ ಅಕ್ಟೋಬರ್‌ ತಿಂಗಳ ಹಾಜರಾತಿಯನ್ನು ಫೀಡ್ ಮಾಡದೆ ಇರುವುದರಿಂದ ಈ ಸಮಸ್ಯೆ ಎದುರಾಗಿದೆ ಎಂದು ನೌಕರರು ಹೇಳುತ್ತಿದ್ದಾರೆ.

ಅಲ್ಲದೆ ಈ ಸಂಬಂಧ ಘಟಕ ವ್ಯವಸ್ಥಾಪಕರಿಗೆ ನೌಕರರು ಲಿಖಿತ ಮನವಿ ಸಲ್ಲಿಸಿದ್ದು ಹಾಜರಾತಿಯನ್ನು ಫೀಡ್ ಮಾಡದ ಹೊರತು LMSನಲ್ಲಿ ಸ್ವಯಂ ಚಾಲಿತ ರಜೆಯನ್ನು ಪಡೆಯುವುದು ಅಸಾಧ್ಯ, ಇದರಿಂದ ಹಾಜರಾತಿಯನ್ನು ಉತ್ತಮ ಪಡಿಸಿಕೊಂಡು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳಿಗೆ ರಜೆ ಪಡೆದುಕೊಳ್ಳಲು ಆಗುತ್ತಿಲ್ಲ.

LMS ತಂತ್ರಾಂಶದಲ್ಲಿ ಸುಧಾರಣೆ ಕಂಡು ಬಂದರೂ ತಂತ್ರಾಂಶದಲ್ಲಿ ಹಾಜರಾತಿ ಫೀಡ್ ಮಾಡದಿರುವುದು ಬೇಸರ ತಂದಿದೆ. ದಯವಿಟ್ಟು ಈ ವಿಷಯಕ್ಕೆ ಸಂಭಂದಿಸಿದಂತೆ ಪರಿಹಾರ ನೀಡಬೇಕು ಎಂದು ಜಿಗಣಿಯಲ್ಲಿರುವ ಬಿಎಂಟಿಸಿ ಘಟಕ 27ರ ನೌಕರರು ಮನವಿ ಸಲ್ಲಿಸಿದ್ದಾರೆ.

ಇನ್ನು ಇದು ಬರಿ ಜಿಗಣಿ ಘಟಕವೊಂದರ ಸಮಸ್ಯೆಯಲ್ಲ ಬಿಎಂಟಿಸಿಯ ಎಲ್ಲ ಘಟಕಗಳಲ್ಲೂ ಈ ಸಮಸ್ಯೆ ಎದುರಾಗಿದ್ದು ನೌಕರರು ತುರ್ತು ರಜೆ ಪಡೆಯುವುದಕ್ಕೂ ಪರದಾಡುವಂತಾಗಿದೆ. ಅಲ್ಲದೆ ಸಾಂದರ್ಭಿಕ ರಜೆ ಹಾಕುವುದಕ್ಕೂ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಸಂಬಂಧಪಟ್ಟ ತಾಂತ್ರಿಕ ವಿಭಾಗದ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನೌಕರರಿಗೆ ಆಗುತ್ತಿರುವ ತೊಂದರೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...