BMTC: ಮಾರ್ಗ ಮಧ್ಯೆ ಬಸ್ ನಿಲ್ಲಿಸಲಿಲ್ಲ ಅಂತ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ- ಎಫ್ಐಆರ್ ದಾಖಲು

ಬೆಂಗಳೂರು: ಮಾರ್ಗಮಧ್ಯೆ ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂದು ಪ್ರಯಾಣಿಕ ಮಹಿಳೆಯೊಬ್ಬರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಕೈಕೊಂಡನಹಳ್ಳಿ ಬಸ್ ನಿಲ್ದಾಣ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಬಿಎಂಟಿಸಿ 38 ನೇ ಘಟಕದ ಚಾಲಕ ಅತಹರ ಹುಸೇನ್ ಮಹಿಳೆಯಿಂದ ಹಲ್ಲೆಗೊಳಗಾದವರು. ಈ ಸಂಬಂಧ ಬೆಳಂದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಘಟನೆ ವಿವರ- ದೂರು: ಬಿಎಂಟಿಸಿ 38 ನೇ ಘಟಕದ ಚಾಲಕ ಅತಹರ ಹುಸೇನ್ ಆದ ನಾನು ಬಿಎಂಟಿಸಿ ಸಂಸ್ಥೆಯಲ್ಲಿ ಚಾಲಕನಾಗಿದ್ದೇನೆ. ಅದರಂತೆ ಇವತ್ತಿನ ದಿನ ಅಂದರೆ ಜೂ.11 ರಂದು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ಬಸ್ (KA57 F0836) ಚಾಲಕರಾಗಿ ನಿರ್ವಾಹಕ (CONDUCTOR) ಮುರಳಿ ಮೋಹನ್ ಅವರ ಜತೆಗೆ ಟಿನ್ ಫ್ಯಾಕ್ಟರಿ- ವಿಪ್ರೋಗೆಟ್- ಎಲೆಕ್ಟ್ರಾನಿಕ್ ಸಿಟಿ ಮಾರ್ಗಾಚರಣೆಯಲ್ಲಿದ್ದೆವು.
ಹೀಗಿರುವಾ ಬೆಳಗ್ಗೆ ಸುಮಾರು 8:40ರ ಸಮಯದಲ್ಲಿ ಕೈಕೊಂಡನಹಳ್ಳಿ ಬಸ್ ನಿಲ್ದಾಣದ ಹತ್ತಿರ ಮಹಿಳಾ ಪ್ರಯಾಣಿಕರಾದ ಕಾವ್ಯ ಎಂಬುವರು ಟಿಕೆಟ್ ತೆಗೆದುಕೊಂಡಿರುವ ಸ್ಥಳದಲ್ಲಿ ಇಳಿಯದೇ, ಚಾಲನೆಯಲ್ಲಿದ್ದ ಬಸನ್ನು ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಇಳಿಯುತ್ತೇನೆ ಎಂದು ಹೇಳಿದ್ದರು.
ಅದಕ್ಕೆ ನಾನು ಟ್ರಾಫಿಕ್ ಬಹಳ ಇದೆ ಮುಂದಿನ ಬಸ್ ಸ್ಟಾಪ್ನಲ್ಲಿ ಇಳಿಸುತ್ತೇನೆ ಎಂದು ಹೇಳಿದೆ. ಆಗ ಕಾವ್ಯ ಅವರು ಏಕಾಏಕಿ ಬಸ್ ನಿಲ್ಲಿಸಲೇ ಬೋಳಿ ಮಗನೇ ಎಂದು ಅವಾಚ್ಯ ಶಬ್ದಗಳಿಂದ ಬೈದು ಚಪ್ಪಲಿಯಿಂದ ಹೊಡೆದು ಅವಮಾನಗೊಳಿಸಿದ್ದಾರೆ.
ಅಲ್ಲದೆ ರಸ್ತೆ ಮಧ್ಯದಲ್ಲಿ ಬಸನ್ನು ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಾಡಿ ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ವೇಳೆ ತನಗೆ ದೊಡ್ಡ ದೊಡ್ಡವರೆಲ್ಲ ಗೊತ್ತು ನಿಮಗೆ ಏನು ಮಾಡಿಸುತ್ತೇನೆ ನೋಡಿ ಎಂದು ಬೆದರಿಕೆ ಹಾಕಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು, ಚಪ್ಪಲಿಯಿಂದ ಹೊಡೆದು, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಪ್ರಯಾಣಿಕ ಮಹಿಳೆ ಕಾವ್ಯ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಚಾಲಕ ಅತಹರ ಹುಸೇನ್ ಬೆಂಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...