NEWSನಮ್ಮರಾಜ್ಯಶಿಕ್ಷಣ

ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಎಸ್‌ಎಸ್ಎಲ್‌ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದರೂ ಕೂಡ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯೊಬ್ಬರನ್ನು ಫೇಲ್ ಮಾಡಲಾಗಿದೆ.

ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ಓದುತ್ತಿದ್ದ ಲೀಸಾ ಖಾನಮ್ ಫೇಲಾಗಿರುವ ಅಂಧ ವಿದ್ಯಾರ್ಥಿನಿ.

ಈಕೆ ಅಂಧ ವಿದ್ಯಾರ್ಥಿನಿಯಾಗಿರುವುದರಿಂದ ವಿಷಯಗಳ ವಿನಾಯಿತಿ ಇತ್ತು. ಅದರಂತೆ ಗಣಿತ ಮತ್ತು ವಿಜ್ಞಾನ ವಿಷಯದ ಬದಲು ಪೊಲಿಟಿಕಲ್ ಸೈನ್ಸ್, ಎಕನಾಮಿಕ್ಸ್ ವಿಷಯದಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿತ್ತು. ಇದರಂತೆ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದರೂ ಆಬ್ಸೆಂಟ್ ಎಂದು ನಮೂದಿಸಲಾಗಿದೆ.

ಇನ್ನು ಈಕೆ ಇತರ ವಿಷಯಗಳಲ್ಲಿ ಪಡೆದಿರುವ ಅಂಕಗಳು ಉರ್ದು 124, ಕನ್ನಡ -100, ಇಂಗ್ಲೀಷ್ -92, ಎಕನಾಮಿಕ್ಸ್ -98, ಪೊಲಿಟಿಕಲ್ ಸೈನ್ಸ್ -92 ಸೇರಿದಂತೆ ಒಟ್ಟು 526 ಅಂಕದೊಂದಿಗೆ 84.16% ಫಲಿತಾಂಶ ಪಡೆದಿದ್ದಾರೆ.

ಎಲ್ಲ ಪರೀಕ್ಷೆ ಬರೆದರೂ ತನ್ನನ್ನು ಫೇಲ್ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಿಲ್ಲ ಎಂದು ನಮೋದಿಸಲಾಗಿದೆ, ಅಂಧತ್ವ ಇದ್ದರೂ ಕಷ್ಟಪಟ್ಟು ಕೇಳಿಸಿಕೊಂಡು ಪರೀಕ್ಷೆ ಪರೆದಿದ್ದೇನೆ ಆದರೆ ಹೀಗೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ನೋವು ತೋಡಿಕೊಂಡಿದ್ದಾಳೆ.

ಇತ್ತ ಶಿಕ್ಷಣ ಇಲಾಖೆಗೆ ಎಲ್ಲಾ ದಾಖಲೆ ನೀಡಲಾಗಿದೆ. ಆದರೂ ಪ್ರಾಧಿಕಾರ ಫೇಲ್ ಮಾಡಿದೆ, ಆಗಿರುವ ಯಡವಟ್ಟನ್ನು ತಕ್ಷಣ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ