NEWSದೇಶ-ವಿದೇಶರಾಜಕೀಯ

ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳದ ನೀರಸ ಬಜೆಟ್: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ ಜ್ವಲಂತ ಸಮಸ್ಯೆಗಳಾದ ಹಣದುಬ್ಬರ, ನಿರುದ್ಯೋಗ ಮುಂತಾದವುಗಳನ್ನು ಪರಿಹರಿಸುವಂತಹ ಆಯವ್ಯಯ ಮಂಡಿಸುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ನಿರುದ್ಯೋಗ ಹಾಗೂ ಹಣದುಬ್ಬರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಲೇ ಬಂದಿದ್ದಾರೆ. ಪರಿಣಾಮವಾಗಿ, ಉನ್ನತ ಶಿಕ್ಷಣ ಪಡೆದ ವಿದ್ಯಾವಂತರು ಕೂಡ ಸಣ್ಣಸಣ್ಣ ನೌಕರಿಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಜನಸಾಮಾನ್ಯರು ಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಆಯವ್ಯಯವಾಗಿದ್ದು, ಇದರಲ್ಲಾದರೂ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದರು.

ಶಿಕ್ಷಣ ಹಾಗೂ ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಮ್‌ ಆದ್ಮಿ ಪಾರ್ಟಿ ಬಲವಾಗಿ ಪ್ರತಿಪಾದಿಸುತ್ತದೆ. ಇದರಿಂದ ಮಾತ್ರ ದೇಶದ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ ಹಾಗೂ ಭವಿಷ್ಯ ಸುಭದ್ರವಾಗಿರುತ್ತದೆ ಎಂದು ನಂಬಿದ್ದೇವೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ಬಜೆಟ್‌ನಲ್ಲಿ ಶಿಕ್ಷಣ ವಲಯದ ಅನುದಾನವನ್ನು ಶೇ. 2.64ರಿಂದ ಶೇ. 2.5ಕ್ಕೆ ಇಳಿಸಿದ್ದಾರೆ.

ಆರೋಗ್ಯ ವಲಯದ ಅನುದಾನವನ್ನು ಶೇ. 2.2ರಿಂದ ಶೇ. 1.98ಕ್ಕೆ ಇಳಿಕೆ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹಾಗೂ ಅಪಾಯಕಾರಿ ನಿಲುವು. ಬಜೆಟ್‌ನಲ್ಲಿ ದೊಡ್ಡದೊಡ್ಡ ಕಾರ್ಪೊರೇಟ್‌ ಕಂಪನಿಗಳನ್ನು ಮೆಚ್ಚಿಸಲು ಜನಸಾಮಾನ್ಯರ ಹಿತವನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.

ಮಹಿಳಾ ಸಮ್ಮಾನ ಉಳಿತಾಯ ಪ್ರಮಾಣಪತ್ರ ಹೆಸರಿನಲ್ಲಿ ಕೇವಲ 7.7% ಬಡ್ಡಿ ನೀಡುವ ಯೋಜನೆಯನ್ನು ಘೋಷಿಸಿರುವುದು ಮಹಿಳೆಯ ಮೂಗಿಗೆ ತುಪ್ಪ ಹಚ್ಚುವ ಕೆಲಸ. ಹಲವು ಬ್ಯಾಂಕ್‌ಗಳು ಇದಕ್ಕಿಂತ ಹೆಚ್ಚಿನ ಬಡ್ಡಿ ನೀಡುತ್ತಿರುವಾಗ, ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಲಾಭವಾಗದು.

ಅದರ ಬದಲು ಮಹಿಳೆಯರಿಗೆ ಮಾಸಿಕ ಆದಾಯ ನೀಡುವ ಹಾಗೂ ಉದ್ಯೋಗ ನೀಡುವ ಯೋಜನೆಗಳನ್ನು ಜಾರಿಗೆ ತರಬೇಕಿತ್ತು. ದೆಹಲಿ ಸರ್ಕಾರದಂತೆ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಯೋಜನೆಯನ್ನಾದರೂ ಕೇಂದ್ರ ಸರ್ಕಾರ ಘೋಷಿಸಬಹುದಿತ್ತು ಎಂದು ಪೃಥ್ವಿ ರೆಡ್ಡಿ ಹೇಳಿದರು.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ