NEWSನಮ್ಮಜಿಲ್ಲೆ

ತುಮಕೂರಿಗೆ ಅರ್ಬನ್, ಮೆಟ್ರೋ ರೈಲು ಎರಡು ಬರಲಿ: ಗೃಹ ಸಚಿವ ಜಿ.ಪರಮೇಶ್ವರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ.

ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ.

ಹೀಗಾಗಿ ಕೇಂದ್ರದ ಸಚಿವ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು, ಕೇಂದ್ರದ ಭೂಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರಿಗೆ‌ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಇನ್ನು ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಬರಬೇಕಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.

ತುಮಕೂರು ನಗರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು.

ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಬಳಿಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಮಾತನಾಡುತ್ತೇನೆ. ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ. ಎರಡು ಯೋಜನೆಗಳು ಆದರೆ ತಪ್ಪಿಲಿ ಎಂದರು.

ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. 20 ಸಾವಿರ ಎಕರೆಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ.‌ ಬೆಂಗಳೂರಿಗೆ ತುಮಕೂರು 70 ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ‌. ಸಭೆ ಕರೆಯಬೇಕು ಎಂದು ಹೇಳಿದ್ದಾರೆ‌. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.

Megha
the authorMegha

Leave a Reply

error: Content is protected !!
Latest news
ಸಿದ್ದಾರ್ಥ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ಚಿರತೆ: ಪ್ರಾಣದ ಹಂಗು ತೊರೆದು ಅಮ್ಮನ ರಕ್ಷಿಸಿದ ಮಗಳು ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರವು ಕಬ್ಬು ಬೇಸಾಯದಲ್ಲಿ ಎಐ ತಂತ್ರಜ್ಞಾನ ಜಾರಿಗೆ ತರಲಿ: ಕುರುಬೂರು ಶಾಂತಕುಮಾರ್ ಹುಚ್ಚಮ್ಮ ದೇವಿಯ 650 ಕುರಿಗಳ ಮೆರವಣಿಗೆ, 12 ಟನ್ ಮಟನ್ ಸಾರು: ಇತಿಹಾಸ ನಿರ್ಮಿಸಿದ ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಅನ್ನ... KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್