CrimeNEWSನಮ್ಮರಾಜ್ಯ

ವಿದ್ಯುತ್ ಸ್ಪರ್ಶದಿಂದ ನೆನಪಿನ ಶಕ್ತಿ ಕಳೆದುಕೊಂಡ ಬಾಲಕ – ಗುತ್ತಿಗೆದಾರನ ವಿರುದ್ಧ ದೂರು ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ:  10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿ  ಕಳೆದುಕೊಂಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ ನಡೆದಿದೆ.

ಮಿಲಾಪುರ ಗ್ರಾಮದ ವೀರೇಶ್ ಗಾಯಗೊಂಡ ಬಾಲಕ. ಗುತ್ತಿಗೆದಾರ ಮಹದೇವಪ್ಪ ಎಂಬುವರು ಆರೋಪಿಯಾಗಿದ್ದು, ಈತನ ವಿರುದ್ದ ಪ್ರಕರಣ ದಾಖಲಿಸಿ ಕೊಂಡಿರುವುದಾಗಿ ಕಾರಟಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಳೆದ ವಾರ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿತ್ತು. ಆಟದ ಮೈದಾನದಲ್ಲಿ ವಿದ್ಯುತ್ ತಂತಿಗಳು ಹರಡಿಕೊಂಡಿದ್ದು ಅದಕ್ಕೆ ಈ ಗುತ್ತಿಗೆದಾರನೆ ಕಾರಣ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ವಿದ್ಯುತ್ ಬಳಸಿ ನೀರಿನ ಟ್ಯಾಂಕ್ ನಿರ್ಮಿಸುವ ವೇಳೆ ಆಟದ ಮೈದಾನದಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರರು ವಿದ್ಯುತ್ ಕಂಬದಿಂದ ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಗಷ್ಟೇ ಅಲ್ಲದೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವಿದ್ಯುದಾಘಾತದ ನಂತರ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಲ್ಲದೆ, ಬಾಲಕನ ಕೈಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ