NEWSನಮ್ಮರಾಜ್ಯ

KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- CPM ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ. ಹೀಗಾಗಿ ಇದನ್ನು ಬಿಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸೂಕ್ತಾಧಿಕಾರಿಗಳು 03.02.2025ರಂದು ಆದೇಶ ಹೊರಡಿರುವ ಹಿನ್ನೆಲೆಯಲ್ಲಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಪ್ರಾಂಶುಪಾಲರು, ಕಾರ್ಯ ವ್ಯವಸ್ಥಾಪಕರು/ ಮುದ್ರಣ ನಿಯಂತ್ರಣಾಧಿಕಾರಿಗಳಿಗೆ ಈ ಆದೇಶ ಹೊರಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ. ಕೇಂದ್ರ ಕಚೇರಿ ಹಾಗೂ ವಿಭಾಗಗಳಲ್ಲಿ ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ಅಧಿಕಾರಿ/ ನೌಕರರ ಜನವರಿ-25ರ ಮಾಹೆಯ ಹಾಜರಾತಿಯನ್ನು ಸೂಕ್ತಾಧಿಕಾರಿಗಳು ಗಮನಿಸಿದ್ದಾರೆ.

ಪ್ರತಿ ತಿಂಗಳು ಕೆಲವು ಅಧಿಕಾರಿ/ಸಿಬ್ಬಂದಿಗಳು ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿಯನ್ನು ಸಲ್ಲಿಸದೆ ತಿಂಗಳ ಕೊನೆಯಲ್ಲಿ Backend updation ಮಾಡಲಾಗುತ್ತಿದೆ ಹಾಗೂ ವಿಭಾಗ/ಘಟಕಗಳಲ್ಲಿ ನೌಕರರ ಹಾಜರಾತಿಯಲ್ಲಿ A ಮತ್ತು L ಎಂದು ನಮೂದಿಸಿ ತದನಂತರ ಅದನ್ನು ರಜೆ ಎಂದು ಬದಲಾಯಿಸುತ್ತಿರುವುದು ಕಂಡುಬಂದಿದೆ.

ಹೀಗಾಗಿ ತುರ್ತು ಮತ್ತು ಅತಿ ಜರೂರು ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳಲ್ಲಿ A ಮತ್ತು L ಎಂದು ಹಾಜರಾತಿಯಲ್ಲಿ ನಮೂದಿಸಿರುವುದನ್ನು Backend updation ನಲ್ಲಿ ರಜೆ ಎಂದು ಮಾಡಬಾರದು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇನ್ನು Android ಮೊಬೈಲ್ ಹೊಂದಿಲ್ಲದವರು ಹಾಗೂ ಅನ್ಯ ಕರ್ತವ್ಯ ನಿಯೋಜನೆ ಮೇಲೆ ಕಚೇರಿಯಿಂದ ಹೊರಗೆ ಉಳಿಯುವ ಸಂದರ್ಭ ಹೊರತುಪಡಿಸಿ, ಇನ್ನುಳಿದ ಸಮಯದಲ್ಲಿ Web check-in ಮಾಡತಕ್ಕದ್ದಲ್ಲ. ಕಡ್ಡಾಯವಾಗಿ ಕಚೇರಿಗೆ ಬಂದ ನಂತರವೇ “ಸಾರಿಗೆ ಮಿತ್ರ” ಮೊಬೈಲ್ APP ಮುಖಾಂತರ ಹಾಜರಾತಿ ನಮೂದಿಸಬೇಕು ಎಂದು ತಿಳಿಸಿದ್ದಾರೆ.

Web check-in ವ್ಯವಸ್ಥೆ ದುರುಪಯೋಗ ಮಾಡಿಕೊಂಡಿರುವುದು ಗಮನಕ್ಕೆ ಬಂದಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿತನಾಗಿದ್ದೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ