CrimeNEWSನಮ್ಮರಾಜ್ಯ

ಲಂಚ ಪ್ರಕರಣ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಬಂಧನಕ್ಕೆ ಏಳು ವಿಶೇಷ ತಂಡ ರಚಿಸಿದ ಲೋಕಾಯುಕ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಡಿಎಲ್‌ಗೆ ಕಚ್ಚ ಸಾಮಗ್ರಿಗಳನ್ನು ಕೊಳ್ಳುವುದಕ್ಕೆ ಟೆಂಡರ್‌ ಕೊಡುವುದಕ್ಕೆ ಲಂಚದ ರೂಪದಲ್ಲಿ 40 ಲಕ್ಷ ರೂಪಾಯಿ ಸ್ವೀಕರಿಸುತಿದ್ದ ವೇಳೆ ರೆಡ್‌ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಸದ್ಯ ಕಂಬಿಹಿಂದೆ ಬಂಧಿಯಾಗಿದ್ದು, ಈಗ ಅವರ ತಂದೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಬಂಧನಕ್ಕೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಈ ತಂಡಗಳು ಈಗಾಗಲೇ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ರಾಜ್ಯದಾದ್ಯಂತ ಟ್ರ್ಯಾಕಿಂಗ್ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಬೆಂಗಳೂರು ಮತ್ತು ದಾವಣಗೆರೆ ನಗರಗಳ ವಿವಿಧೆಡೆ ಬೇಟೆಯಾಡುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲು ಸಿದ್ಧತೆ ನಡೆಸಲಾಗಿದೆ.

ಬೆಂಗಳೂರು, ದಾವಣಗೆರೆಯಲ್ಲಿರುವ ಬಿಜೆಪಿ ಶಾಸಕರ ನಿವಾಸ, ಶಾಸಕರ ಭವನ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಕಚೇರಿಗೆ ನೋಟಿಸ್ ಕಳುಹಿಸಲಾಗುವುದು. ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಶಾಸಕ ವಿರೂಪಾಕ್ಷಪ್ಪ ಅವರು ಘಟನೆ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ತಲೆ ಮರೆಸಿಕೊಂಡಿದ್ದಾರೆ.

ಪ್ರಶಾಂತ್ ಮಾಡಾಳ್ ತನ್ನ ತಂದೆಯ ಪರವಾಗಿ ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಗ್ರಿಗಳನ್ನು ಖರೀದಿಸಲು ಟೆಂಡರ್ ಮಂಜೂರು ಮಾಡುವ ಸಲುವಾಗಿ 40 ಲಕ್ಷ ರೂಪಾಯಿ ನಗದು ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ಮಾಡಲ್ ಅವರನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ದಾಳಿವೇಳೆ ಅಧಿಕಾರಿಗಳು ಶಾಸಕರ ನಿವಾಸ ಮತ್ತು ಕಚೇರಿಗಳಿಂದ 8 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ. ಇನ್ನು ರಾಜ್ಯದಲ್ಲಿ 40% ಕಮಿಷನ್‌ ಸರ್ಕಾರ ಎಂದು ಭ್ರಷ್ಟಾಚಾರದಲ್ಲೇ ನಿರತವಾಗಿದೆ ಬಿಜೆಪಿ ಸರ್ಕಾರ ಎನ್ನುವುದಕ್ಕೆ ಇದು ಇನ್ನಷ್ಟು ಪುಷ್ಠಿ ನೀಡುವಂತಿದೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ