ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ರಮಿತಾ ರಾಯ್ (20) ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂಲತಃ ಪಶ್ಚಿಮ ಬಂಗಾಳದ ರಮಿತಾ ಬೆಂಗಳೂರಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ. ಶುಕ್ರವಾರ ರಮಿತಾಳ ತಂದೆ, ತಾಯಿ ಬೆಂಗಳೂರಿಗೆ ಬಂದ ಬಳಿಕ ಅವರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.