CrimeNEWSನಮ್ಮಜಿಲ್ಲೆ

ನೇಣು ಬಿಗಿದುಕೊಂಡು ಬಿಎಸ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆಚಾರ್ಯ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ‌ ಮಾಡುತ್ತಿದ್ದ ವಿದ್ಯಾರ್ಥಿನಿ ರಮಿತಾ ರಾಯ್ (20) ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದ ರಮಿತಾ ಬೆಂಗಳೂರಿನಲ್ಲಿ ಬಿಎಸ್‌ಸಿ ವ್ಯಾಸಂಗ‌ ಮಾಡುತ್ತಿದ್ದರು. ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ. ಶುಕ್ರವಾರ ರಮಿತಾಳ ತಂದೆ, ತಾಯಿ ಬೆಂಗಳೂರಿಗೆ ಬಂದ ಬಳಿಕ ಅವರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ