CRIMENEWSನಮ್ಮರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಸ್‌ ಡಿಕ್ಕಿ : ನಾಲ್ವರು ಮೃತ- ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಕೇರಳ ಮೂಲದ ಖಾಸಗಿಯ ಪಿ.ಕೆ.ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದ್ದು, ಇನ್ನು ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇತ್ತ ವಿಷಯ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಮೃತರು.

ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?