ಬೆಂಗಳೂರು: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 5ಗಂಟೆಯಿಂದಲೇ ಬಸ್ ಸೇವೆ ಆರಂಭವಾಗಿದೆ.
ಇನ್ನು ಇಂದು ಬೆಳಗ್ಗೆ 5 ಗಂಟೆಯಲ್ಲಿ ಬಸ್ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ನಗದಲ್ಲಿ ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ 6ಗಂಟೆ ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಒಂದು ಕಡೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗಲೇ ಬೇಕು ಎಂದು ಕೆಲ ನೌಕರರು ಬಸ್ ಓಡಿಸುವುದಕ್ಕೆ ಮುಂದಾಗಿದ್ದಾರೆ. ಮತ್ತೊಂದೆಡೆ ಇಲ್ಲ ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ ಬಂದ್ ನಿಲ್ಲುವುದಿಲ್ಲ ಎಂದು ಶಾಂತಿಯುತವಾಗಿ ಮುಷ್ಕರ ಮಾಡುತ್ತೇವೆ ಎಂದು ಅನಂತ ಸುಬ್ಬರಾವ್ ಹೇಳಿದ್ದಾರೆ.
ಒಟ್ಟಾರೆ ಈವರೆಗೂ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಯಾವುದೇ ಬಸ್ ಬಂದ್‌ಬಿಸಿ ತಟ್ಟಿಲ್ಲ. ಆದರೆ 6ಗಂಟೆ ಬಳಿಕ ಏನಾಗುತ್ತೆಓ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಹಾಸನದಲ್ಲಿ ನಿನ್ನೆಯಿಂದಲೇ ಬಸ್ ಸಂಚಾರ ವಿರಳವಾಗಿದ್ದು ಪ್ರಯಾಣಿಕರು ಬಸ್‌ಗಳಿಲ್ಲದೆ ಪರದಾಡಿದ್ದಾರೆ.
Related
