Please assign a menu to the primary menu location under menu

CrimeNEWSನಮ್ಮರಾಜ್ಯ

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಟೈರ್​ ಬ್ಲಾಸ್ಟ್‌: ಕ್ಷಣಾರ್ಧದಲ್ಲೇ ಬಸ್‌ ಭಸ್ಮ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ನ ಟೈರ್​ ಬ್ಲಾಸ್ಟ್‌ಆದ ಪರಿಣಾಮ ಬಸ್‌ಗೆ ಬೆಂಕಿಹೊತ್ತಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾದ ಘಟನೆ ನಡೆದಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರು – ವಿಜಯಪುರ ಮಾರ್ಗವಾಗ ಕಾರ್ಯಾಚರಣೆ ಮಾಡುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ ಹಿಟ್ಟನಹಳ್ಳಿ ಬಳಿ ಬರುತ್ತಿದ್ದಂತೆ ಟೈರ್​ ಬ್ಲಾಸ್ಟ್​ ಆಗಿದೆ. ಆ ಕ್ಷಣದಲ್ಲೇ ಬಸ್‌ಗೆ ಬೆಂಕಿಹೊತ್ತುಕೊಂಡು ಧಗ ಧಗ ಹೊತ್ತಿ ಉರಿದಿದೆ. ಆದರೆ ಟೈರ್​ ಬ್ಲಾಸ್ಟ್​ ಆದ ಶಬ್ಧ ಕೇಳಿದ ಬಸ್​​ನಲ್ಲಿದ್ದ ಎಲ್ಲರೂ ತಕ್ಷಣ ಕೆಳಕ್ಕೆ ಇಳಿದಿದ್ದಾರೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಆತಂಕದಿಂದಲೇ ಹೇಳಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ನಡು ರಸ್ತೆಯಲ್ಲೇ ಬಸ್​ ಸಂಪೂರ್ಣ ಸುಟ್ಟು ಕರಕಾಲಾಗಿದ್ದು ಭಾರೀ ಪ್ರಮಾಣದಲ್ಲಿ ಸುತ್ತಂಉತ್ತ ಹೊಗೆ ಆವರಿಸಿಕೊಂಡಿತ್ತು. ಜತೆ ಬಸ್‌ನಲ್ಲಿದ್ದ ಪ್ರಯಾಣಿಕರ ಬ್ಯಾಗ್​​ಗಳೆಲ್ಲ ಸುಟ್ಟು ಭಸ್ಮವಾಗಿವೆ.

ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದು, ಬ್ಯಾಗ್​ಗಳು ಬೆಂಕಿಗಾಹುತಿ ಆಗಿದ್ದರಿಂದ ಬ್ಯಾಗ್​ನಲ್ಲಿದ್ದ ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಎಲ್ಲ ಸುಟ್ಟು ಕರಕಲಾಗಿವೆ ಎಂದು ಕಣ್ಣೀರು ಹಾಕುತ್ತ ಗೋಳಾಡುತ್ತಿದ್ದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಅಗ್ನಿ ಶಾಮಕ‌ದಳ ಕೂಡ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...