NEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿಯಲ್ಲಿ ಸಂಚಾರ ನಿಲ್ಲಿಸಿದ ಬಸ್‌ಗಳು: ಡಿಪೋದಿಂದ ಹೊರ ಬಾರದ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರದ ಬಿಸಿ ಬೆಳಗಾವಿಯಲ್ಲಿ ತಟ್ಟಿದ್ದು, ಅಧಿಕಾರಿಗಳು ಸಿಬ್ಬಂದಿಗಳಿಗೆ ಫೋನ್‌ ಮಾಡಿ ಡ್ಯೂಟಿಗೆ ಬರುವಂತೆ ಒತ್ತಡ ಹೇರುತ್ತಿದ್ದಾರೆ.

ಇನ್ನು ಇಂದು ಬೆಳಗ್ಗೆ 4 ಗಂಟೆಯಿಂದಲೇ ನಗರದಲ್ಲಿ ಬಸ್‌ ಸಂಚಾರ ಸ್ತಬ್ಧವಾಗಿವೆ. ಹೀಗಾಗಿ ಬಸ್‌ಗಳನ್ನು ಯಥಾಸ್ಥಿತಿಯಲ್ಲಿ ಓಡಾಡುತ್ತವೆ ಇಲ್ಲವೇ ಎಂದು ಬಸ್‌ ನಿಲ್ದಾಣದಲ್ಲಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಒಂದು ಕಡೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗಗಲೇ ಬೇಕು ಎಂದು ಕೆಲ ನೌಕರರು ಬಸ್‌ ಓಡಿಸುವುದಕ್ಕೆ ಮುಂದಾಗಿದ್ದಾರೆ. ಮತ್ತೊಂದೆಡೆ ಇಲ್ಲ ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ ಬಂದ್‌ ನಿಲ್ಲುವುದಿಲ್ಲ ಎಂದು ಶಾಂತಿಯುತವಾಗಿ ಮುಷ್ಕರ ಮಾಡುತ್ತೇವೆ ಎಂದು ಅನಂತ ಸುಬ್ಬರಾವ್‌ ಹೇಳಿದ್ದಾರೆ.

ಒಟ್ಟಾರೆ ಈವರೆಗೂ ಸಾರ್ವಜನಿಕರಿಗೆ ಬೆಂಗಳೂರಿನಲ್ಲಿ ಯಾವುದೇ ಬಸ್‌ ಬಂದ್‌ಬಿಸಿ ತಟ್ಟಿಲ್ಲ. ಆದರೆ ಬೆಳಗಾವಿ ಇತರ ಭಾಗಗಳಲ್ಲಿ ಬಂದ್‌ ಆಗುತ್ತಿದೆ. ಇದು 6 ಗಂಟೆ ನಂತರ ಯಾವ ಸ್ಥಿತಿಗೆ ತಲುಪುತ್ತದೋ ನೋಡಬೇಕಿದೆ.

Megha
the authorMegha

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ