NEWSಉದ್ಯೋಗನಮ್ಮರಾಜ್ಯ

ನಾಡಿನ ಯುವಕರಿಗೆ ಸಿಹಿ ಸುದ್ದಿ- ಸಿ, ಡಿ ವರ್ಗದ ಹುದ್ದೆಗಳು ಕನ್ನಡಿಗರಿಗೇ ಮೀಸಲು : ವಿಧಾನ ಪರಿಷತ್‌ನಲ್ಲಿ ಖಾಸಗಿ ನಿರ್ಣಯ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ : ರಾಜ್ಯದಲ್ಲಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ `ಸಿ’ ಹಾಗೂ `ಡಿ’ ವೃಂದದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಾಗಿರಿಸಬೇಕು ಎಂದು ಸದಸ್ಯ ಯು.ಬಿ. ವೆಂಕಟೇಶ ಅವರು ಮಂಡಿಸಿದ ಖಾಸಗಿ ನಿರ್ಣಯಕ್ಕೆ ಶುಕ್ರವಾರ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರಕಿತು.

ಬಹುತೇಕ ಕೇಂದ್ರ ಸರ್ಕಾರದ ಹುದ್ದೆಗಳು ನಮ್ಮ ಕರ್ನಾಟಕ ರಾಜ್ಯದಲ್ಲಂತೂ ಅನ್ಯ ಭಾಷಿಗರ ತಾಣವಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಉಭಯ ಸದನಗಳಲ್ಲಿ ಒಂದು ನಿರ್ಣಯವನ್ನು ಸಂವಿಧಾನದ ತಿದ್ದುಪಡಿಗಾಗಿ ಮಂಡಿಸಿ ಅನುಮೋದಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ವೆಂಕಟೇಶ ವಿಷಯ ಮಂಡಿಸಿದರು.

ಅಲ್ಲದೆ ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ ಎನ್ನುವ ಆಶಯದ ಭಾಗವಾಗಿ ಈ ವಿಚಾರ ಮಂಡಿಸಿದ ವೆಂಕಟೇಶ, ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ 1947 ರಿಂದ ಅಧಿಕಾರಕ್ಕೆ ಬಂದಂತಹ ಕೇಂದ್ರ ಸರ್ಕಾರಗಳು, ಅನೇಕ ರಾಜ್ಯಗಳಲ್ಲಿ ಹಲವಾರು ಪ್ರಕಾರಗಳಲ್ಲಿ ಉದ್ಯಮಗಳನ್ನು ಬ್ಯಾಂಕ್‌ಗಳನ್ನು ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಿವೆ.

ಅವುಗಳಲ್ಲಿ ಉದ್ಯೋಗದ ಅವಕಾಶಗಳನ್ನು ಕಲ್ಪಿಸಿ ಕೊಡುವ ಸಂದರ್ಭದಲ್ಲಿ ಸ್ಥಳೀಯ ಭಾಷೆ ಮಾತನಾಡುವ ಆಯಾಯ ರಾಜ್ಯದ ಜನರಿಗೆ ತಾಂತ್ರಿಕೇತರ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಮೀಸಲಿಡುವ ಯಾವುದೇ ರೀತಿಯ ನಿಯಮಗಳನ್ನು ಕಾನೂನಾತ್ಮಕವಾಗಿ ರೂಪಿಸದಿರುವ ಕಾರಣದಿಂದ ಕನ್ನಡಿಗರು ಉದ್ಯೋಗ ವಂಚಿತರಾಗುವಂತೆ ಮಾಡಿದೆ ಎಂದರು.

ಇಂತಹ ನಿರ್ಣಯಗಳು ದೇಶದ ಎಲ್ಲ ರಾಜ್ಯಗಳಲ್ಲೂ ಆಯಾಯ ಸದನದಲ್ಲಿ ಮಂಡಿಸಲು, ನಾವು ಮಾದರಿಯಾಗಬೇಕು. ಎಲ್ಲ ರಾಜ್ಯಗಳಿಂದ ಒತ್ತಡ ತರುವುದರ ಜತೆಗೆ ನಮ್ಮ ರಾಜ್ಯದ ಲೋಕಸಭೆ ಮತ್ತು ರಾಜ್ಯ ಸಭೆಯ ಸದಸ್ಯರು ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಆಯಾಯ ರಾಜ್ಯದವರಿಗೆ ಶೇ.80 ರಷ್ಟು ಮೀಸಲಿಡುವ ಉದ್ದೇಶಕ್ಕಾಗಿ ಸಂವಿಧಾನ ತಿದ್ದುಪಡಿಗೆ ಒತ್ತಾಯಿಸಬೇಕು ಎಂಬ ವಿಷಯ ಸಹ ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.

1983ರಲ್ಲಿ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆಯವರು ಕೇಂದ್ರ ಸರ್ಕಾರದಲ್ಲಿನ ಹುದ್ದೆಗಳಲ್ಲಿ ಶೇ.80 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡುವ ಸಂಬಂಧ ವರದಿಯನ್ನು ನೀಡಲು ಡಾ. ಸರೋಜಿನಿ ಮಹಿಷಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದರು.

ಡಾ.ಮಹಿಷಿ ವರದಿ ಇಲ್ಲಿಯವರೆಗೂ ಅನುಷ್ಠಾನಗೊಂಡಿಲ್ಲ, ಹಲವಾರು ಬಾರಿ ಪರಿಸ್ಥಿತಿಗೆ ಅನುಗುಣವಾಗಿ ಮಹಿಷಿ ವರದಿ ಪರಿಷ್ಕರಣೆಯೂ ಆಗಿದೆ. ಆದರೆ, ಇಲ್ಲಿಯವರೆಗೂ ಸರೋಜಿನಿ ಮಹಿಷಿ ವರದಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗದೇ ಇರುವುದು ಮಾತ್ರ ಸೋಜಿಗದ ಸಂಗತಿ ಎಂದು ವೆಂಕಟೇಶ ವಿಶ್ಲೇಷಿಸಿದರು.

ಉತ್ತರ ಭಾರತೀಯರೇ ಬ್ಯಾಂಕ್‌ಗಳಲ್ಲಿ ಅಧಿಕವಾಗಿದ್ದಾರೆ, ಹೀಗಾಗಿ ಕನ್ನಡಿಗರಿಗೆ ವ್ಯವಹಾರ ನಿರ್ವಹಣೆ ಕಷ್ಟದಾಯಕವಾಗಿ ಪರಿಗಣಿಸಿದೆ, ಗ್ರಾಹಕರಿಗೆ ಇದರಿಂದ ಸಾಕಷ್ಟು ಕಿರಿಕಿರಿ ಯಾಗುತ್ತಿದೆ. ಅನಿವಾರ್ಯವಾಗಿ ಹಿಂದಿ ಭಾಷೆಯನ್ನು ಮಾತನಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ ಎಂಬ ಕನ್ನಡಗಿರ ಸಮಸ್ಯೆಯನ್ನು ವೆಂಕಟೇಶ ನಿರ್ಣಯ ಮಂಡನೆ ಸಂದರ್ಭದಲ್ಲಿ ವಿವರಿಸಿದರು.

ಸಂವಿಧಾನ ತಿದ್ದುಪಡಿಯಾಗದ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಕನ್ನಡಿಗರಿಗೆ ಹುದ್ದೆ ಎಂಬ ನಮ್ಮ ಎಲ್ಲ ವರದಿಗಳು ಕನ್ನಡ ಪರ ಹೋರಾಟಗಾರರ ಒತ್ತಾಯಗಳು ಕಾನೂನಾತ್ಮಕವಾಗಿ ಪರಿಣಾಮವನ್ನು ಬೀರುವುದು ಸಾಧ್ಯವಾಗದು ಎಂಬ ಅಭಿಪ್ರಾಯವನ್ನು ವೆಂಕಟೇಶ ಸದನದಲ್ಲಿ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು