NEWSದೇಶ-ವಿದೇಶ

ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಎಚ್‌.ಡಿ.ಕುಮಾರಸ್ವಾಮಿ, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನಕರ್‌ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ಈ ವೇಳೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ.ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್‌ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

ರಾಜೀನಾಮೆ ಬಳಿಕ ಕಾಣಿಸಿಕೊಂಡ ಧನಕರ್: ಇನ್ನೂ ಪ್ರಮಾಣವಚನ ಕಾರ‍್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ‍್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...