NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು ಮಾಡಿ: ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಚ್.ಆ‌ರ್.ಎಂ.ಎಸ್.ತಂತ್ರಾಂಶದಲ್ಲಿ ಆ.4ರಿಂದ ಮುಂದಿನ ಆದೇಶದವರೆಗೆ ಅಧಿಕಾರಿ/ ನೌಕರರ ರಜೆ ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು  ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆ.2ರಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಅದರಲ್ಲಿ ನಿಗಮಗಳ ಕಾರ್ಮಿಕ ಸಂಘಟನೆಗಳು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಆದೇಶಿಸಿದ್ದಾರೆ.

ಆದ್ದರಿಂದ, ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಅಧಿಕಾರಿ/ ನೌಕರರು ರಜೆ ಪಡೆಯುವ ಅವಕಾಶವನ್ನು (Auto approval) ಆ.4ರಿಂದ ಮುಂದಿನ ಆದೇಶವರೆಗೆ ತಡೆಹಿಡಿಯಲಾಗಿದೆ.

ಮುಂದುವರಿದು, ಉಲ್ಲೇಖ-1ರ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ವಾರದ ರಜೆ ಮತ್ತು ದೀರ್ಘಾವಧಿ ರಜೆಯಲ್ಲಿರುವ ನೌಕರರನ್ನು ಹೊರತುಪಡಿಸಿ ಎಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಈಗಾಗಲೇ ಅಧಿಕಾರಿ/ ನೌಕರರು ರಜೆ ಪಡೆದಿರುವುದನ್ನು ಆ.4ರಿಂದ ಮುಂದಿನ ಆದೇಶದವರೆಗೆ ರದ್ದುಪಸಲು ಕ್ರಮ ಕೈಗೊಳ್ಳುವಂತೆ ತಿಳಿಸಲು ಸೂಕ್ತಾಧಿಕಾರಿಗಳಿಂದ ನಿರ್ದೇಶಿಸಲ್ಪಟ್ಟಿರುತ್ತೇನೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Megha
the authorMegha

Leave a Reply

error: Content is protected !!