CrimeNEWSದೇಶ-ವಿದೇಶ

ಕಾರು ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ- ನಡುವೆ ರಸ್ತೆಯಲ್ಲೇ ಮಹಿಳೆಗೆ ಥಳಿಸಿದ ಇನ್ಸ್​ಸ್ಪೆಕ್ಟರ್​

ವಿಜಯಪಥ ಸಮಗ್ರ ಸುದ್ದಿ

ಜಮ್ಶೆಡ್ಪುರ: ಜಾರ್ಖಂಡ್​​ನ ಜಮ್ಶೆಡ್ಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ಒಟ್ಟು 8 ಪ್ರಯಾಣಿಕರು ಇದ್ದರು, ಅವರೆಲ್ಲ ಅದಿತ್ಯಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತ 6 ಮಂದಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ದಲಿತ ಮಹಿಳೆಗೆ ಥಳಿಸಿದ ಇನ್ಸ್​ಸ್ಪೆಕ್ಟರ್​: ಇನ್ಸ್​ಸ್ಪೆಕ್ಟರ್​ವೊಬ್ಬರು ದಲಿತ ಮಹಿಳೆಯನ್ನು ಥಳಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಸೀತಾಮರ್ಹಿಯಲ್ಲಿ ಈ ಘಟನೆ ನಡೆದಿದೆ.

ಬಾಲಕಿಯೊಬ್ಬಳ ಅಪಹರಣ ಸಂಬಂಧಿಸಿದಂತೆ ಮಹಿಳೆಯರಿಬ್ಬರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಎಂಟ್ರಿ ನೀಡಿದ ಇನ್ಸ್​ಸ್ಪೆಕ್ಟರ್ ಮಹಿಳೆಗೆ ಲಾಠಿಯಿಂದ ಥಳಿಸಿದ್ದಾರೆ.

ಸುರಸಂದ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಸುರಸಂದ್​ ಪೊಲೀಸ್​ ಠಾಣೆಯ ಇನ್ಸ್​ಸ್ಪೆಕ್ಟರ್​ ರಾಜ್​ಕಿಶೋರ್​ ಸಿಂಗ್​ ನಡುರಸ್ತೆಯಲ್ಲೇ ಮಹಿಳೆಗೆ ಲಾಠಿಯಿಂದ ಹೊಡೆದಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆ ಮಾಡುತ್ತಿದ್ದ ಮಹಿಳೆಯನ್ನು ಬೇರ್ಪಡಿಸುವ ದೃಷ್ಟಿಯಿಂದ ಇನ್ಸ್​ಸ್ಪೆಕ್ಟರ್ ಲಾಠಿಯಲ್ಲಿ ಥಳಿಸಿದ್ದಾರೆ ಎನ್ನಲಾಗುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ