CrimeNEWSನಮ್ಮಜಿಲ್ಲೆ

ಕಾರು-ಬೈಕ್ ಮುಖಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ

ವಿಜಯಪಥ ಸಮಗ್ರ ಸುದ್ದಿ

ಹಾರೋಹಳ್ಳಿ: ಕಾರು-ಬೈಕ್ ಮುಖಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಬಳಿ ನಡೆದಿದೆ.

ಮೃತ ಮೂವರು ಕಾರ್ಖಾನೆಯೊಂದರ ಕಾರ್ಮಿಕರು. ಉತ್ತರ ಭಾರತದಿಂದ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದರು. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಕೃಷ್ಣ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಸಂಬಂಧ ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!