CRIMENEWSದೇಶ-ವಿದೇಶ

ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟ ನೋವಿನ‌ ಜತೆಗೆ ದಿಗ್ಭ್ರಮೆ ಉಂಟುಮಾಡಿದೆ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ದೆಹಲಿಯ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು Xನಲ್ಲಿ ತಿಳಿಸಿದ್ದಾರೆ.

ಇನ್ನು ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ