CrimeNEWSನಮ್ಮಜಿಲ್ಲೆ

KSRTC ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ನಾಲ್ವರು ಸಾವು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್​ಗೆ ಕಾರು ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್​ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂಬುವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ KSRTC ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಅಲ್ಲದೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು