ಚಿತ್ರದುರ್ಗ: ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಬಾರ ಗ್ರಾಮದಲ್ಲಿ ಸಂಭವಿಸಿದೆ.
ಸಿಬಾರ ಗ್ರಾಮದ ಹೋಟೆಲ್‌ವೊಂದರ ಸಮೀಪ ದಾವಣಗೆರೆ-ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಹಿಂದಿನಿಂಧ ಡಿಕ್ಕಿ ಹೊಡೆದಿದ್ದು ಅವಘಡದಲ್ಲಿ ಬೆಂಗಳೂರಿನ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಭಾಗ ಸಂರ್ಪೂಣ ಜಖಂಗೊಂಡಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾಸಿದ್ದಾರೆ.
Related

Deva