CRIMENEWSನಮ್ಮಜಿಲ್ಲೆ

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು: ಇಬ್ಬರು ಮೃತ, ಮೂವರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಬೆಳ್ಳಂಬೆಳಗ್ಗೆ ಲಾರಿ- ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಟಿ.ಬೇಗೂರು ಬಳಿ ನಡೆದಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಬರುತ್ತಿದ್ದ ಗದಗ ಜಿಲ್ಲೆಯ ರೋಣಾ ನಿವಾಸಿಗಳಾದ ಶಿವಲಿಂಗ ಗೌಡ (60), ಪ್ರಮೀಳಾ (55) ಮೃತಪಟ್ಟಿದ್ದು, ಕಾರಿನಲ್ಲಿದ್ದ ಮೃತರ ಕುಟುಂಬದ ಮೂವರು ಗಾಯಗೊಂಡಿದ್ದಾರೆ.

ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಜಿಲ್ಲೆಯ ರೋಣಾದಿಂದ ಈ ಕುಟುಂಬ ಬೆಂಗಳೂರಿಗೆ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಪರಿಣಾಮ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಇನ್ನು ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಯಷ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ