CRIMENEWSನಮ್ಮಜಿಲ್ಲೆ

ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: 6 ಮಂದಿ ಮೃತ, ಓರ್ವನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ರಸ್ತೆ ಪಕ್ಕದಲ್ಲಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

ಹರಿಹರದ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು.

ಇನ್ನು ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಎಂಬುವರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್​ ಎಂಬುವವರ ಸಂಬಂಧಿಕರ ಮಕ್ಕಳು ಎಂದು ತಿಳಿದು ಬಂದಿದೆ.

ಶಾಲೆ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರೆಲ್ಲ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್​ನಲ್ಲಿದ್ದರು. ಆದರೆ ಅಷ್ಟರಲ್ಲೇ ಜವರಾಯನ ತನ್ನ ಅಟ್ಟಹಾಸ ಮೆರೆದಿದ್ದಾನೆ.

ಅತಿ ವೇಗವಾಗಿ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಡಿಕ್ಕಿ ಹೊಡಿದಿದೆ ಪರಿಣಾಮ ಆರು ಜನರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನೆ ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ಬ್ಯಾಡಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ