ಹುಟ್ಟುಹಬ್ಬ ಆಚರಿಸಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಂಭೀರಾ ಗಾಯ


ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಭಾನುವಾರ ಜಿಲ್ಲೆಯ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಪಟ್ಟಣ ರಸ್ತೆಯ ಬಳಿ ಸಂಭವಿಸಿದೆ.
ಹೆಬ್ಬಾಳ ನಿವಾಸಿ ಮೋಹನ್ (21) ಮೃತ ಯುವಕ. ಇನ್ನು ಮಂಜುನಾಥ್, ಚಾಲಕ ಪುನೀತ್, ಸಂಗಮೇಶ್ ಮತ್ತು ಮನೋಹರ್ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಬ್ಬಾಳಿ ನಲ್ಲಿ ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡು ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಭಾನುವಾರ ತಾಲೂಕಿನ ಕನ್ನಿದೊಡ್ಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ.
ಅಪಘಾತದ ರಭಸಕ್ಕೆ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related
