CRIMENEWSನಮ್ಮರಾಜ್ಯ

ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಾರಿಗೆ ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಣ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿರುವ ಧಾರುಣ ಘಟನೆ ಇಂದು ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ನಡೆದಿದೆ.

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ.

ಇನ್ನೋವಾ ಕಾರು ಜೇವರ್ಗಿ ಬೈಪಾಸ್ ಬಳಿ ಬರುತ್ತಿದ್ದಂತೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಇಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ