Thursday, October 31, 2024
CrimeNEWSದೇಶ-ವಿದೇಶನಮ್ಮರಾಜ್ಯ

ಡಾ. ವೀರೇಂದ್ರ ಹೆಗ್ಗಡೆ ವಿರುದ್ಧದ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆ, 4.5 ಲಕ್ಷ ರೂ. ಪರಿಹಾರ ರೂಪದ ದಂಡ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ  ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆ ಅಲ್ಲದೆ ಧರ್ಮಸ್ಥಳ ಕ್ಷೇತ್ರಕ್ಕೆ 4.5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಬೆಳ್ತಂಗಡಿ ನ್ಯಾಯಾಲಯ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೀಗ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸೋಮನಾಥ ನಾಯಕ್ ಬಂಧನ ಖಚಿತವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅಥವಾ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅಲ್ಲಿಯ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಈ ಹಿಂದೆ ಬೆಳ್ತಂಗಡಿ ಸಿವಿಲ್ ನ್ಯಾಯಾಲಯ ಸೋಮನಾಥ ನಾಯಕ್ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ಮಾಡಿತ್ತು. ಆದರೂ ನ್ಯಾಯಾಲಯದ ಆದೇಶಕ್ಕೆ ಗೌರವ ನೀಡದೆ ಸೋಮನಾಥ ನಾಯಕ್ ಸುಳ್ಳು ಆರೋಪಗಳನ್ನು ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಲೇ ಇದ್ದರು ಎಂದು ದೂರಲಾಗಿತ್ತು.

ಈ ವಿಚಾರವನ್ನು ಕ್ಷೇತ್ರದ ಪರವಾಗಿ ಮಿಸ್ ಕೇಸ್ ನಂ: 3/15 ರಲ್ಲಿ ನ್ಯಾಯಾಲಯದ ಮುಂದಿರಿಸಿದಾಗ, ಸುದೀರ್ಘ ವಿಚಾರಣೆ ನಡೆಸಿ ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿದ ನ್ಯಾಯಾಲಯ ನಾಯಕ್‌ಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ರೂ. ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿ, ಅದಕ್ಕಾಗಿ ಆಸ್ತಿ ಸಹ ಮುಟ್ಟುಗೋಲು ಹಾಕಿಕೊಂಡಿತ್ತು.

ಈ ಆದೇಶದ ವಿರುದ್ಧ ಸೋಮನಾಥ ನಾಯಕ್ ಅಪೀಲು ಸಲ್ಲಿಸಿದ ಬಳಿಕ ಸುದೀರ್ಘ ವಾದ-ಪ್ರತಿವಾದ ನಡೆಸಿದ ಅಪರ ನ್ಯಾಯಾಲಯ 22-03-2022 ರಲ್ಲಿ ನಾಯಕ್ ಅವರ ಅಪೀಲಿನಲ್ಲಿ ನಿಜಾಂಶವಿಲ್ಲವೆಂದು ತೀರ್ಪಿತ್ತು ತನಿಖಾ ನ್ಯಾಯಾಲಯ ನೀಡಿದ ಶಿಕ್ಷೆಯನ್ನು ಎತ್ತಿ ಹಿಡಿದು ಅಪೀಲು ವಜಾ ಮಾಡಿತ್ತು.

ಎರಡೂ ನ್ಯಾಯಾಲಯಗಳಲ್ಲಿ ಸೋಮನಾಥ ನಾಯಕ್ ತಪ್ಪಿತಸ್ಥರೆಂದು ರುಜುವಾತಾದಂತೆ ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯ 31-03-2022 ರಂದು, ನ್ಯಾಯಾಲಯದ ಘನತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸೋಮನಾಥ ನಾಯಕ್ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ನಾಯಕ್ ಅವರನ್ನು ಬಂಧಿಸಿ 3 ತಿಂಗಳ ಅವಧಿಯ ಸೆರೆಮನೆ ವಾಸಕ್ಕೆ ಕಳುಹಿಸುವುದಕ್ಕೆ ಆದೇಶಿಸಿತ್ತು.

ಈ ಮೇಲಿನ ಆದೇಶಗಳ ವಿರುದ್ಧ ಸೋಮನಾಥ ನಾಯಕ್ 06-04-2022 ರಂದು ಕರ್ನಾಟಕ ಹೈ ಕೋರ್ಟ್‌ನಲ್ಲಿ ರಿಟ್ ಪಿಟಿಶನ್ ನಂ: 7692/2022 ರಂತೆ ರಿಟ್ ಅರ್ಜಿ ಸಲ್ಲಿಸಿ ತನ್ನನ್ನು ಬಂಧಿಸದಂತೆ ತಡೆಯಾಜ್ಞೆ ನೀಡಬೇಕೆಂದೂ ಮತ್ತು ಬೆಳ್ತಂಗಡಿ ನ್ಯಾಯಾಲಯಗಳ ಆದೇಶವನ್ನು ವಜಾ ಮಾಡಬೇಕೆಂದು ಮನವಿಮಾಡಿದ್ದರು.

ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ಧರ್ಮಸ್ಥಳದ ಹೆಗ್ಗಡೆಯವರ ಘನತೆಯನ್ನು ದೇಶವೇ ಗುರುತಿಸಿ ಗೌರವಿಸುತ್ತಿರುವಾಗ ನ್ಯಾಯಾಲಯಗಳ ಆದೇಶವನ್ನು ಸಹ ಲೆಕ್ಕಿಸದೆ ಸುಳ್ಳು ಆರೋಪಗಳ ಮುಖೇನ ನ್ಯಾಯಾಲಯಕ್ಕೂ ಧರ್ಮಸ್ಥಳದ ಹೆಗ್ಗಡೆಯವರಿಗೂ ಅಗೌರವ ತೋರಿದ ಸೋಮನಾಥ ನಾಯಕ್ ಬಗ್ಗೆ ಮೃದುಧೋರಣೆ ತೋರಿದಲ್ಲಿ ನ್ಯಾಯಾಂಗ ವ್ಯವಸ್ಥೆಗೇ ಕಳಂಕ ಎಂದು ನಾಯಕ್‌ಗೆ ಛೀಮಾರಿ ಹಾಕಿತು.

ಅಲ್ಲದೆ ಬೆಳ್ತಂಗಡಿಯ ಎರಡೂ ನ್ಯಾಯಾಲಯಗಳ ಆದೇಶ ನ್ಯಾಯೋಚಿತವಾಗಿದ್ದು ತಾನು ಮಧ್ಯ ಪ್ರವೇಶಿಸುವ ಅಗತ್ಯವೇ ಇರುವುದಿಲ್ಲ ಎಂಬ ತನ್ನ ಸುದೀರ್ಘ 148 ಪುಟಗಳ ಐತಿಹಾಸಿಕ ತೀರ್ಪು ನೀಡಿ ಸೋಮನಾಥ ನಾಯಕ್ ಬಂಧನಕ್ಕೆ 05-05-2022 ರಂದು ಹಸಿರು ನಿಶಾನೆ ನೀಡಿತ್ತು. ಈ ಆದೇಶದ ವಿರುದ್ಧ ಸೋಮನಾಥ್ ನಾಯಕ್ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ನಂ: 16127/2022 ರಂತೆ ಅರ್ಜಿ ಸಲ್ಲಿಸಿದ್ದರು.

19-10-2022 ರಲ್ಲಿ ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ಸರ್ವೋಚ್ಚ ನ್ಯಾಯಾಲಯವು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಬೆಳ್ತಂಗಡಿಯ ನ್ಯಾಯಾಲಯಗಳು ನೀಡಿದ ತೀರ್ಪುಗಳಿಗೆ ತಾನು ಮಧ್ಯ ಪ್ರವೇಶಿಸುವ ಯಾವುದೇ ಕಾರಣಗಳು ಕಂಡು ಬರುವುದಿಲ್ಲ. ನ್ಯಾಯಾಲಯದ ಪ್ರತಿಬಂಧಕಾಜ್ಞೆ ಊರ್ಜಿತದಲ್ಲಿದ್ದರೂ ಅರ್ಜಿದಾರ ಪದೇಪದೇ ನ್ಯಾಯಾಲಯದ ಆಜ್ಞೆಯನ್ನು ಧಿಕ್ಕರಿಸಿ ಉಲ್ಲಂಘಿಸಿರುವುದು ಉದ್ದೇಶಪೂರ್ಕವಾಗಿದೆ.

ಅರ್ಜಿದಾರ ಕೆ. ಸೋಮನಾಥ್ ನಾಯಕ್ ಆದೇಶ ಉಲ್ಲಂಘಿಸಿದ ತಪ್ಪಿತಸ್ಥ ಎಂಬುವುದು ರುಜುವಾತುಗೊಂಡ ಕಾರಣ ವಾದ ಮಂಡನೆಯ ಮಧ್ಯೆ ನ್ಯಾಯ ಪೀಠವು ಕೆ.ಸೋಮನಾಥ್ ನಾಯಕ್ ಅವರ ವರ್ತನೆಗೆ ಕಟು ಶಬ್ಧಗಳಿಂದ ಛೀಮಾರಿ ಹಾಕಿ ಅವರು ನಿವೇದಿಸಿಕೊಂಡ ಕ್ಷಮಾಪಣೆಯನ್ನೂ ತಿರಸ್ಕರಿಸಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪಿತ್ತಿದೆ.

ಕೆ. ಸೋಮನಾಥ್ ನಾಯಕ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯವು ಈಗಾಗಲೇ ವಾರೆಂಟ್ ಜಾರಿಗೊಳಿಸಿದೆ. ಶ್ರೀ ಕ್ಷೇತ್ರದ ಪರವಾಗಿ ದೆಹಲಿಯ ಹಿರಿಯ ನ್ಯಾಯಾವಾದಿ ಕೆ.ವಿ. ವಿಶ್ವನಾಥನ್, ವಿ.ಎನ್. ರಘುಪತಿ, ಕೆ.ಚಂದ್ರನಾಥ ಆರಿಗ, ಬೆಂಗಳೂರು ಮತ್ತು ರತ್ನವರ್ಮ ಬುಣ್ಣು ಅವರ ಬೆಳ್ತಂಗಡಿ ತಂಡ ಪ್ರತಿನಿಧಿಸಿತ್ತು.

Leave a Reply

error: Content is protected !!
LATEST
ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ